ಬಿಸಿ ನಾಗೇಶ್ 
ರಾಜ್ಯ

ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಪ್ರಕಟ ಶೀಘ್ರದಲ್ಲೆ: ಸಚಿವ ಬಿಸಿ ನಾಗೇಶ್

ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ.

ಬೆಂಗಳೂರು: ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಮಾದರಿ ಶಾಲೆ, ಸ್ಪೋಕನ್ ಇಂಗ್ಲೀಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿದಂತೆ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಕ್ರಮಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವ ಗುರಿ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಈ ಕುರಿತು ಅವರಿಂದು ಟ್ವೀಟ್‌ ಮಾಡಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನ, 15 ಸಾವಿರ ಶಿಕ್ಷಕರ ನೇಮಕ, ಶಾಲಾ- ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ, ಶಿಕ್ಷಕರ ಮುಂಬಡ್ತಿ ಹಾಗೂ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

ಶಾಲಾ ಶಿಕ್ಷಣ‌ ಮತ್ತು ಸಾಕ್ಷರತೆ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಭೌತಿಕ ತರಗತಿಗಳ ಆರಂಭ ಹಾಗೂ ಕಲಿಕಾ ನಷ್ಟ ಸರಿದೂಗಿಸಲು ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಯಿತು ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಲ್ಫ್ ಆಫ್ ಮೆಕ್ಸಿಕೋ, ಒಂಟಾರಿಯೊ ಲೇಕ್ ಬಳಿಕ Strait of Hormuz ಗೆ ನನ್ನ ಹೆಸರು ಮರುನಾಮಕರಣ ಮಾಡಿ- ಅಮೆರಿಕ ಅಧ್ಯಕ್ಷ Trump ವಿಚಿತ್ರ ಬೇಡಿಕೆ!

ರಕ್ಷಣಾ ಸಾಮರ್ಥ್ಯ ಇನ್ನಷ್ಟು ಬಲಿಷ್ಠ: ದೇಶೀಯ ನಿರ್ಮಿತ ಗ್ಲೈಡ್ ಬಾಂಬ್ ಖಗಂಟಕ್ -243 ಪರೀಕ್ಷೆ ಯಶಸ್ವಿ

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು': ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta