ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರು 1,098 ಸೇರಿ 1,608 ಹೊಸ ಪ್ರಕರಣ ಪತ್ತೆ; 2 ಸಾವು

Vishwanath S

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಕರ್ನಾಟಕದಲ್ಲಿ 1,608 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 40,22,714ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 2 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 40,123ಕ್ಕೆ ಏರಿಕೆಯಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1,098 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,46,564ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 2,068 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,71,759ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 10,790ಕ್ಕೆ ಏರಿಕೆಯಾಗಿದೆ. 

ಇಂದು ರಾಜ್ಯಾದ್ಯಂತ ಒಟ್ಟು 25,524 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 68,066,461ಕ್ಕೆ ಏರಿಕೆಯಾಗಿದೆ. 

SCROLL FOR NEXT