ಆನೆ ದಾಳಿ 
ರಾಜ್ಯ

ಮಡಿಕೇರಿ: ಕಾಡಾನೆ ದಾಳಿಗೆ ಬಡ ದಿನಗೂಲಿ ಸಾವು

ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ಆನೆ ದಾಳಿಗೆ ದಿನಗೂಲಿಯೊಬ್ಬರು ಸಾವನ್ನಪ್ಪಿದ್ದಾರೆ. 

ಮಡಿಕೇರಿ: ಮಡಿಕೇರಿ ತಾಲೂಕಿನ ಚೆಟ್ಟಳ್ಳಿಯಲ್ಲಿ ಆನೆ ದಾಳಿಗೆ ದಿನಗೂಲಿಯೊಬ್ಬರು ಸಾವನ್ನಪ್ಪಿದ್ದಾರೆ. 

ಬುಧವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಚೆಟ್ಟಳ್ಳಿ ಸಮೀಪದ ಮಲ್ಕೋಡ್ ಗ್ರಾಮದ ನಿವಾಸಿ 60 ವರ್ಷದ ಮಹಮ್ಮದ್ ಮೃತವ್ಯಕ್ತಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಮೊಹಮ್ಮದ್ ಕೆಲಸಕ್ಕೆಂದು ಕಂದಕೆರೆ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಕಾಡಾನೆ ದಾಳಿ ಮಾಡಿದೆ. 

ದಾಳಿಯಲ್ಲಿ ಮೊಹಮ್ಮದ್ ಬೆನ್ನು ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿತ್ತು. ಜೋರಾಗಿ ಕೂಗಿಕೊಂಡಿದ್ದರಿಂದ ಇತರ ಗ್ರಾಮಸ್ಥರನ್ನು ಅಲ್ಲಿಗೆ ತೆರಳಿದಾಗ ರಸ್ತೆಯ ಮೇಲೆ ಆತ ಅಂಗಾತ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಮಡಿಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಥಮ ಚಿಕಿತ್ಸೆ ನಂತರ ಉತ್ತಮ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಯಿತು.

ಆದರೆ, ತೀವ್ರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೊಹಮ್ಮದ್ ಪತ್ನಿಯನ್ನು ಅಗಲಿದ್ದು ಬಡ ದಂಪತಿಗೆ ಮಕ್ಕಳಿಲ್ಲ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ದಾಖಲಾಗಿದೆ. ಮಡಿಕೇರಿ ಡಿಸಿಎಫ್ ಪೊವಯ್ಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT