ಆರಗ ಜ್ಞಾನೇಂದ್ರ 
ರಾಜ್ಯ

ವೀಸಾ ಅವಧಿ ಮುಗಿದರೂ ನೆಲೆಸಿರುವ ವಿದೇಶಿ ವಲಸಿಗರು, ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಹೆಚ್ಚು: ಆರಗ ಜ್ಞಾನೇಂದ್ರ

ಅಕ್ರಮ ವಿದೇಶಿ ವಲಸಿಗರನ್ನು ಹಿಡಿದಿಡುವ ದಿಗ್ಬಂಧನ ಕೇಂದ್ರದ ಸಾಮರ್ಥ್ಯವನ್ನು ಇಮ್ಮಡಿಗೊಳಿಸಿ  ಅಗತ್ಯ ಕ್ರಮ ತೆಗೆದುಕೊಳ್ಳುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಉನ್ನತ ಮಟ್ಟದ ಜಂಟಿ ಸಭೆ ನಡೆಸಿದರು.

ಬೆಂಗಳೂರು:  ಅಕ್ರಮ ವಿದೇಶಿ ವಲಸಿಗರನ್ನು ಹಿಡಿದಿಡುವ ದಿಗ್ಬಂಧನ ಕೇಂದ್ರದ ಸಾಮರ್ಥ್ಯವನ್ನು ಇಮ್ಮಡಿಗೊಳಿಸಿ  ಅಗತ್ಯ ಕ್ರಮ ತೆಗೆದುಕೊಳ್ಳುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಉನ್ನತ ಮಟ್ಟದ ಜಂಟಿ ಸಭೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಕೂಡ ಉಪಸ್ಛಿತರಿದ್ದರು.

ವೀಸಾ ಅವಧಿ ಮುಗಿದರೂ ದೇಶದಲ್ಲಿಯೇ ಉಳಿದುಕೊಳ್ಳುತ್ತಿರುವ ವಿದೇಶಿ ವಲಸಿಗರು, ದೇಶವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಅಪಾಯ ಇದೆ. ಹೀಗಾಗಿ, ಅವರನ್ನು ಗಡಿಪಾರು ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಸದ್ಯ ಇರುವ ಅಕ್ರಮ ವಿದೇಶಿ ವಲಸಿಗರಿಗೆ ತಾತ್ಕಾಲಿಕ ವಸತಿ ಕಲ್ಪಿಸುವ ‘ದಿಗ್ಬಂಧನ ಕೇಂದ್ರ’ವನ್ನು ವಿಸ್ತರಿಸಿ ಸಾಮರ್ಥ್ಯ ಹೆಚ್ಚಿಸುವ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಭೆಯಲ್ಲಿ ಪ್ರಸ್ತಾಪಿಸಿದರು.

‘ಅಕ್ರಮ ಬಾಂಗ್ಲಾದೇಶಿ ನಾಗರಿಕರೂ ಸೇರಿದಂತೆ ಇತರ ವಿದೇಶಗಳ ವಲಸಿಗರನ್ನು, ಕಾನೂನಿನಂತೆ ಬಂಧಿಸಿ, ಯಾವುದೇ ಕಾರಾಗೃಹಗಳಲ್ಲಿ ಇಡದೆ, ಅವರಿಗೆಂದೇ ಇರುವ ದಿಗ್ಬಂಧನ ಕೇಂದ್ರದಲ್ಲಿ ವಸತಿ ಕಲ್ಪಿಸಬೇಕಿದೆ. ಆದರೆ, ಬೆಂಗಳೂರಿನ ಸಮೀಪ ನೆಲಮಂಗಲದಲ್ಲಿ ಮಾತ್ರ ದಿಗ್ಬಂಧನ ಕೇಂದ್ರ ಕಾರ್ಯಾಚರಿಸುತ್ತಿದ್ದು, ಅಲ್ಲಿ ಸ್ಥಳಾವಕಾಶ ಕೊರತೆ ಇದೆ’ ಎಂದು ಸೂದ್‌ ಹೇಳಿದರು.

ಅದಕ್ಕೆ ಗೃಹ ಸಚಿವರು, ‘ಪ್ರಸ್ತುತ ದಿಗ್ಬಂಧನ ಕೇಂದ್ರದ ಸಾಮರ್ಥ್ಯ ವಿಸ್ತರಣೆಗೆ ಸಮಾಜ ಕಲ್ಯಾಣ ಇಲಾಖೆ ಅನುದಾನ ಒದಗಿಸಬೇಕು. ಅನುದಾನ ಬಿಡುಗಡೆ ವಿಳಂಬ ಆಗದಂತೆ ಕ್ರಮ ಕೈಗೊಳ್ಳಬೇಕು‘ ಎಂದು ಸಚಿವ ಕೋಟಾ ಬಳಿ ವಿನಂತಿಸಿದರು.

ಆಗ ಮಾತನಾಡಿದ ಕೋಟ, ಗೃಹ ಇಲಾಖೆ ಸಲ್ಲಿಸುವ ಪ್ರಸ್ತಾವನೆಯನ್ನು ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಸಭೆಯಲ್ಲಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ನಿರ್ದೇಶನವನ್ನೂ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

SCROLL FOR NEXT