ಪದಕ ಪಡೆದ ಪೊಲೀಸ್ ಅಧಿಕಾರಿಗಳು 
ರಾಜ್ಯ

ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಇಲಾಖೆಯ ಶ್ರೇಷ್ಠ ತನಿಖಾ ಪದಕ!

ಕರ್ನಾಟಕದ ಆರು ಮಂದಿ ಪೊಲೀಸ್ ಅಧಿಕಾರಿಗಳೂ ಸೇರಿದಂತೆ ದೇಶದ ಒಟ್ಟು 151 ಮಂದಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ನೀಡಲಾಗಿದೆ.

ನವದೆಹಲಿ/ಬೆಂಗಳೂರು: ಕರ್ನಾಟಕದ ಆರು ಮಂದಿ ಪೊಲೀಸ್ ಅಧಿಕಾರಿಗಳೂ ಸೇರಿದಂತೆ ದೇಶದ ಒಟ್ಟು 151 ಮಂದಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ನೀಡಲಾಗಿದೆ.

ಅಪರಾಧ ಪ್ರಕರಣಗಳ ಉತ್ತಮ ತನಿಖೆಗಾಗಿ ಕರ್ನಾಟಕದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಲಕ್ಷ್ಮೀ ಗಣೇಶ್ ಕೆ, ಡಿವೈಎಸ್‍ಪಿಗಳಾದ ವೆಂಕಟಪ್ಪ ನಾಯಕ, ಮೈಸೂರು ರಾಜೇಂದ್ರ ಗೌತಮ್, ಶಂಕರ್ ಕಾಳಪ್ಪ ಮಾರಿಹಾಳ್, ಶಂಕರಗೌಡ ವೀರಣ್ಣಗೌಡ ಪಾಟೀಲ್, ಸರ್ಕಲ್ ಇನ್ಸ್‍ಪೆಕ್ಟರ್ ಗುರುಬಸವರಾಜ ಎಚ್. ಹಿರೇಗೌಡರ್ ಅವರುಗಳಿಗೆ ಕೇಂದ್ರ ಗೃಹ ಸಚಿವರ ಶ್ರೇಷ್ಠ ತನಿಖಾ ಪದಕ ಘೋಷಿಸಲಾಗಿದೆ.

ಇನ್ನೂ ಪ್ರಶಸ್ತಿ ಪಡೆದವರಲ್ಲಿ ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) 15, ಮಹಾರಾಷ್ಟ್ರ ಪೊಲೀಸ್ ಇಲಾಖೆಯ 11, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ತಲಾ 10, ಕೇರಳ ಪೊಲೀಸ್, ರಾಜಸ್ಥಾನ ಪೊಲೀಸ್ ಮತ್ತು ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ತಲಾ ಎಂಟು ಅಧಿಕಾರಿಗಳು ಪದಕ ಪುರಸ್ಕೃತರಾಗಿದ್ದಾರೆ. ಅಂತೆಯೇ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸರು ಕೂಡ ಪ್ರಶಸ್ತಿಗೆ ಭಾಜನರಾಗಿದ್ದು, ಇದಲ್ಲದೆ ಪ್ರಶಸ್ತಿ ಪುರಸ್ಕೃತರಲ್ಲಿ 28 ಮಹಿಳಾ ಪೊಲೀಸ್ ಅಧಿಕಾರಿಗಳೂ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಅಪರಾಧದ ತನಿಖೆಯ ಉನ್ನತ ವೃತ್ತಿಪರ ಮಾನದಂಡಗಳನ್ನು ಉತ್ತೇಜಿಸುವ ಮತ್ತು ತನಿಖೆಯಲ್ಲಿ ಅಂತಹ ಶ್ರೇಷ್ಠತೆಯನ್ನು ಗುರುತಿಸುವ ಉದ್ದೇಶದಿಂದ 2018ರಲ್ಲಿ ಈ ಪದಕ ನೀಡಿಕೆ ಆರಂಭಿಸಲಾಗಿತ್ತು. ಇದನ್ನು ಪ್ರತಿ ವರ್ಷ ಆಗಸ್ಟ್ 12 ರಂದು ಘೋಷಿಸಲಾಗುತ್ತದೆ.

ತನಿಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಗುರುತಿಸಿ ಕೇಂದ್ರ ತನಿಖಾ ಸಂಸ್ಥೆಗಳು, ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಯ ಸದಸ್ಯರಿಗೆ ತನಿಖೆಯಲ್ಲಿ ಶ್ರೇಷ್ಠತೆಯ ಆಧಾರದ ಮೇಲೆ ಪದಕವನ್ನು ನೀಡಲಾಗುತ್ತದೆ. ಹೆಡ್ ಕಾನ್‌ಸ್ಟೆಬಲ್‌ನಿಂದ ಹಿಡಿದು ಪೊಲೀಸ್ ಅಧೀಕ್ಷಕರವರೆಗೆ ಶ್ರೇಣಿಯ ಅರ್ಹ ಅಧಿಕಾರಿಗಳ ಶಿಫಾರಸುಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಕೇಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel