ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ 'ಯುವಜನ ಮಹೋತ್ಸವ' ಹಾಗೂ ವಿಶ್ವವಿದ್ಯಾನಿಲಯ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಚಿತ್ರನಟ ಯಶ್ ಜೊತೆ 
ರಾಜ್ಯ

ಭಾರತವನ್ನು ಮುಂದಿನ 25 ವರ್ಷಗಳಲ್ಲಿ ಮಹಾನ್ ಶಕ್ತಿಯಾಗಿ ಪರಿವರ್ತಿಸಲು ಕೆಲಸ ಮಾಡಿ: ಯುವಕರಿಗೆ ಸಿಎಂ ಬೊಮ್ಮಾಯಿ ಕರೆ

ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಸೂಪರ್ ಪವರ್ ದೇಶವನ್ನಾಗಿ ಪರಿವರ್ತಿಸಲು ಯುವಕರು ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಮೈಸೂರು: ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಸೂಪರ್ ಪವರ್ ದೇಶವನ್ನಾಗಿ ಪರಿವರ್ತಿಸಲು ಯುವಕರು ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ಅವರು ನಿನ್ನೆ ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಬೃಹತ್ ಯುವಜನಸತ್ವವನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಂದಿನ 25 ವರ್ಷಗಳು ದೇಶ ಮತ್ತು ಕರ್ನಾಟಕ ಎರಡಕ್ಕೂ ಸುವರ್ಣ ವರ್ಷವಾಗಿರಲಿದೆ ಎಂದರು. 

‘ನವ ಕರ್ನಾಟಕ’ ನಿರ್ಮಾಣಕ್ಕೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಘೋಷಿಸಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದರು. “ರಾಜ್ಯಗಳ ಮರುಸಂಘಟನೆಯ ನಂತರ, ಕರ್ನಾಟಕವು ತನ್ನ ಎಲ್ಲಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ 5-ಟ್ರಿಲಿಯನ್ ಡಾಲರ್ ಆರ್ಥಿಕತೆಯ ಕನಸಿನ ಪೈಕಿ ರಾಜ್ಯವು 1.5 ಟ್ರಿಲಿಯನ್ ಡಾಲರ್ ಗುರಿಯನ್ನು ಹೊಂದಿದೆ ಎಂದರು. 

ಮೈಸೂರು ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ, ಬೇಲೂರು, ಹಳೇಬೀಡು, ಮೈಸೂರು ಭಾಗಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಇತರ ಪ್ರಮುಖ ತಾಣಗಳನ್ನು ಒಳಗೊಂಡ ಪ್ರವಾಸೋದ್ಯಮ ಸರ್ಕ್ಯೂಟ್‌ಗೆ ತಮ್ಮ ಸರ್ಕಾರ ಹಣ ಘೋಷಿಸಿದೆ ಎಂದು ಹೇಳಿದರು.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಚಿತ್ರದುರ್ಗ ಸೇರಿದಂತೆ ಇನ್ನಿತರೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮಾನಸಗಂಗೋತ್ರಿ ಆವರಣದಲ್ಲಿ ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಶತಮಾನದಷ್ಟು ಹಳೆಯದಾದ ಮಹಾರಾಜ ಮತ್ತು ಮಹಾರಾಣಿ ಕಾಲೇಜುಗಳ ನವೀಕರಣಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT