ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಖಾದಿ ಪ್ರಚಾರ 
ರಾಜ್ಯ

ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಲ್ಲಿ ಖಾದಿ ಜಾತ್ರೆ: ಬಿಎಂಆರ್‌ಸಿಎಲ್

ಸ್ವಾತಂತ್ರ್ಯೋತ್ಸವ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ಮೆಟ್ರೋ ರೈಲು ನಿಲ್ದಾಣದಲ್ಲಿ ಖಾದಿ ಮಾರಾಟಕ್ಕೆ ಅನುವು ಮಾಡಿಕೊಡುತ್ತಿದೆ.

ಬೆಂಗಳೂರು: ಸ್ವಾತಂತ್ರ್ಯೋತ್ಸವ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ಮೆಟ್ರೋ ರೈಲು ನಿಲ್ದಾಣದಲ್ಲಿ ಖಾದಿ ಮಾರಾಟಕ್ಕೆ ಅನುವು ಮಾಡಿಕೊಡುತ್ತಿದೆ.

ಹೌದು.. ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕೈಮಗ್ಗ ಮತ್ತು ಖಾದಿ ಉತ್ಪನ್ನಗಳನ್ನು ಉತ್ತೇಜಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತವು 60ಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದ ಬೆಂಗಳೂರು ಸಂತೆ ಜಾಗದಲ್ಲಿ ತಮ್ಮ ಉತ್ಪನ್ನಗಳನ್ನು ಉಚಿತವಾಗಿ ಮಾರಾಟ ಮಾಡಲು ಅನುಮತಿ ನೀಡುತ್ತದೆ. ‘ಕುಶಲಕರ್ಮಿಗಳೊಂದಿಗೆ ಖಾದಿ ಪ್ರದರ್ಶನ’ ಆಗಸ್ಟ್ 15 ರಿಂದ 21 ರವರೆಗೆ ಒಂದು ವಾರ ನಡೆಯಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ಈ ಕುರಿತು ಬಿಎಂಆರ್ ಸಿಎಲ್ ನ ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾರ್ಯನಿರ್ವಾಹಕ ನಿರ್ದೇಶಕ ಎ ಎಸ್ ಶಂಕರ್ ಅವರು, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ನೊಂದಿಗೆ ಮಾತನಾಡಿದ್ದು, 'ಈಗಾಗಲೇ ಕರ್ನಾಟಕದಾದ್ಯಂತದ ಕುಶಲಕರ್ಮಿಗಳಿಂದ ಮಳಿಗೆಗಳನ್ನು ಕಾಯ್ದಿರಿಸಲಾಗಿದೆ. ಒಂದು ವಾರದವರೆಗೆ ನಮಗೆ ಯಾವುದೇ ಶುಲ್ಕವನ್ನು ಪಾವತಿಸದೆ ನಮ್ಮ ಜಾಗದಲ್ಲಿ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಅವರಿಗೆ ಅನುಮತಿಸಲಾಗುವುದು. ನಾವು ರಾಜ್ಯದಲ್ಲಿ ಗುಡಿ ಕೈಗಾರಿಕೆಯನ್ನು ಉತ್ತೇಜಿಸಲು ಬಯಸುತ್ತೇವೆ. ಸಂತೆಯಲ್ಲಿ ಸಣ್ಣ ತಿನಿಸುಗಳಿಗೂ ಅನುಮತಿ ನೀಡಲಾಗುವುದು ಎಂದರು.

ಅಂತೆಯೇ ಖಾದಿ ವಸ್ತುಗಳು, ಕಲೆ ಮತ್ತು ಕರಕುಶಲ ವಸ್ತುಗಳು, ಬಟ್ಟೆ, ಗೃಹಾಲಂಕಾರ, ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಉಡುಪುಗಳು, ಸಾವಯವ ಉತ್ಪನ್ನಗಳು, ಆಭರಣಗಳು, ಸೀರೆಗಳು, ಪುರುಷರು, ಮಹಿಳೆಯರು ಮತ್ತು ಮಕ್ಕಳ ಉಡುಪುಗಳು ಮತ್ತು ಇತರ ಉತ್ಪನ್ನಗಳು ನೇರವಾಗಿ ತಯಾರಕರಿಂದ ಗ್ರಾಹಕರಿಗೆ ಮಾರಟವಾಗಲಿವೆ. ಆ ಮೂಲಕ ಖಾದಿ ಉದ್ಯಮಕ್ಕೆ BMRCL ಪ್ರಚಾರ ಮಾಡಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT