ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 791 ಸೇರಿ ರಾಜ್ಯದಲ್ಲಿ 1329 ಮಂದಿಗೆ ಪಾಸಿಟಿವ್; 5 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,29,446ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,29,446ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40144ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 791 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1850840ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3979155ಕ್ಕೆ ಏರಿಕೆಯಾಗಿದೆ. ಇನ್ನು 10105 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ