ಚೈತ್ರ-ಶಿವಕುಮಾರ್ ದಂಪತಿ 
ರಾಜ್ಯ

ಹೊಳೆನರಸಿಪುರ: ವಿಚ್ಛೇದನದ ವಿಷಯವಾಗಿ ಕೋರ್ಟ್ ಆವರಣದಲ್ಲೇ ಪತ್ನಿಯ ಹತ್ಯೆ ಮಾಡಿದ ವ್ಯಕ್ತಿ 

ವಿಚ್ಛೇದನದ ಪ್ರಕರಣದಲ್ಲಿ ಕೋರ್ಟ್ ಗೆ ಹಾಜರಾಗಿದ್ದ ವ್ಯಕ್ತಿ ತನ್ನ ಪತ್ನಿಯನ್ನು ಕೋರ್ಟ್ ಆವರಣದಲ್ಲೇ ಇರಿದು ಹತ್ಯೆ ಮಾಡಿರುವ ಘಟನೆ ಹಾಸನದ ಹೊಳೆನರಸಿಪುರದಲ್ಲಿ ನಡೆದಿದೆ. 

ಹಾಸನ: ವಿಚ್ಛೇದನದ ಪ್ರಕರಣದಲ್ಲಿ ಕೋರ್ಟ್ ಗೆ ಹಾಜರಾಗಿದ್ದ ವ್ಯಕ್ತಿ ತನ್ನ ಪತ್ನಿಯನ್ನು ಕೋರ್ಟ್ ಆವರಣದಲ್ಲೇ ಇರಿದು ಹತ್ಯೆ ಮಾಡಿರುವ ಘಟನೆ ಹಾಸನದ ಹೊಳೆನರಸಿಪುರದಲ್ಲಿ ನಡೆದಿದೆ. 

ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ವಿಚ್ಛೇದನದ ಸಂಬಂಧ ಜೆಎಂಎಫ್ ಸಿ ಕೋರ್ಟ್ ಗೆ ಹಾಜರಾಗಿದ್ದ, ಈ ವೇಳೆ ತನ್ನ ಪತ್ನಿ ಚೈತ್ರಾ(24) ಳನ್ನು ಇರಿದು ಹತ್ಯೆ ಮಾಡಿದ್ದಾನೆ ಎಂದು ಎಸ್ ಪಿ ಹರಿರಾಮ್ ಶಂಕರ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ.
 
ಕೋರ್ಟ್ ಪೊಲೀಸರು ಚೈತ್ರಾ ಅವರನ್ನು ತಾಲೂಕು ಆಸ್ಪತ್ರೆಗೆ ತಕ್ಷಣವೇ ದಾಖಲಿಸಿದರು, ಆ ಬಳಿಕ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆತರುವ ವೇಳೆಗೆ ಆಕೆ ಮೃತಪಟ್ಟಿದ್ದರು. 

ಶಿವಕುಮಾರ್ ಅವರನ್ನು 5 ವರ್ಷಗಳ ಹಿಂದೆ ವಿವಾಹವಾಗಿದ್ದ ಚೈತ್ರಗೆ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಆಗಾಗ್ಗೆ ಕೌಟುಂಬಿಕ ವಿಷಯವಾಗಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಕಾರಣ ಬೇಸತ್ತ ಚೈತ್ರ 2 ವರ್ಷಗಳ ಹಿಂದೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿ ಜೀವನಾಂಶ ಕೇಳಿದ್ದರು.  ಸಂಬಂಧಿಕರು ಹಲವು ಬಾರಿ ಕೌಟುಂಬಿಕ ಕಲಹವನ್ನು ಬಗೆಹರಿಸಲು ಯತ್ನಿಸಿದರಾದರೂ ಅದು ಪ್ರಯೋಜನವಾಗಿರಲಿಲ್ಲ. 

ನ್ಯಾಯಾಧೀಶರು ಲೋಕ್ ಅದಾಲತ್ ನಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸುವುದಕ್ಕಾಗಿ ದಂಪತಿಗೆ ಸಮನ್ಸ್ ಕಳಿಸಿದ್ದರು.  ಈ ಘಟನೆ ನಡೆಯುವುದಕ್ಕೂ ಒಂದು ಗಂಟೆ ಮುನ್ನ ನ್ಯಾಯಾಧೀಶರು ಶಿವಕುಮಾರ್ ಹಾಗೂ ಚೈತ್ರ ಜೊತೆ ಮಾತನಾಡಿದ್ದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel