ಬೀದರ್: ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರ ದುರ್ಮರಣ
ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್: ಎರ್ಟಿಗಾ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ತಾಲೂಕಿನ ಬಂಗೂರು ಬಳಿ ಅಪಘಾತ ಸಂಭವಿಸಿದ್ದು ಮೃತರು ಹೈದರಾಬಾದ್ ನ ಬೇಗಂಪೇಟೆ ನಿವಾಸಿಗಳು ಎಂದು ತಿಳಿದುಬಂದಿದೆ.
ಬೇಗಂಪೇಟೆ ನಿವಾಸಿಗಳು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಇನ್ನು ಅಪಘಾತದಲ್ಲಿ ಆರು ಮಂದಿಗೆ ಗಾಯಗಳಾಗಿದ್ದು ಅವರನ್ನು ಮನ್ನಾಕೇಳಿ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.