ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 812 ಸೇರಿ ರಾಜ್ಯದಲ್ಲಿ 1,121 ಮಂದಿಗೆ ಪಾಸಿಟಿವ್; 5 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,121 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,33,610ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40,152ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 812 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,53,630ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,711 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,83,536ಕ್ಕೆ ಏರಿಕೆಯಾಗಿದೆ. ಇನ್ನು 9,880 ಸಕ್ರಿಯ ಪ್ರಕರಣಗಳಿವೆ.

SCROLL FOR NEXT