ಸ್ಕ್ರೀನ್‌ಶಾಟ್ ಚಿತ್ರ 
ರಾಜ್ಯ

ತ್ರಿವರ್ಣ ಧ್ವಜ ತಲೆಕೆಳಗಾಗಿಟ್ಟುಕೊಂಡು ಎಫ್‌ಬಿ ಲೈವ್‌ ಮಾಡಿದ ಬಿಜೆಪಿ ನಾಯಕ, ದೂರು ದಾಖಲು

ಕಳೆದ ವಾರ ಹರ್ ಘರ್ ತಿರಂಗಾ ಅಭಿಯಾನದ ವೇಳೆ ಫೇಸ್‌ಬುಕ್ ಲೈವ್ ವಿಡಿಯೋದಲ್ಲಿ ರಾಷ್ಟ್ರಧ್ವಜ ಸಂಹಿತೆಗೆ ಅವಮಾನ ಮಾಡಿದ ಆರೋಪದ ಮೇಲೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ, ಬಿಜೆಪಿ ನಾಯಕ ಅನಿಲ್ ಚಳಗೇರಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು: ಕಳೆದ ವಾರ ಹರ್ ಘರ್ ತಿರಂಗಾ ಅಭಿಯಾನದ ವೇಳೆ ಫೇಸ್‌ಬುಕ್ ಲೈವ್ ವಿಡಿಯೋದಲ್ಲಿ ರಾಷ್ಟ್ರಧ್ವಜ ಸಂಹಿತೆಗೆ ಅವಮಾನ ಮಾಡಿದ ಆರೋಪದ ಮೇಲೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ, ಬಿಜೆಪಿ ನಾಯಕ ಅನಿಲ್ ಚಳಗೇರಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೇಲೆ ಹಸಿರು ಪಟ್ಟಿ ಮತ್ತು ಕೆಳಗೆ ಕೇಸರಿ ಪಟ್ಟಿ ಬರುವಂತೆ ತ್ರಿವರ್ಣ ಧ್ವಜವನ್ನು ತಲೆಕೆಳಗಾಗಿ  ಹಾಕಿಕೊಂಡು ಅದರ ಮುಂದೆ ನಿಂತ ಬಿಜೆಪಿ ನಾಯಕ, ತಮ್ಮ ಬೆಂಬಲಿಗರೊಬ್ಬರಿಗೆ ವಿಡಿಯೋ ಮಾಡಲು ಹೇಳಿದ್ದಾರೆ. ರಾಷ್ಟ್ರಧ್ವಜವು ತಲೆಕೆಳಗಾಗಿದೆ ಎಂಬುದು ಅವರಿಗೆ ತಿಳಿಯುವ ಹೊತ್ತಿಗಾಗಲೇ, ವಿಡಿಯೋದ ಸ್ಕ್ರೀನ್‌ಶಾಟ್‌ಗಳು ವೈರಲ್ ಆಗಿದ್ದವು. ಈ ಬಗ್ಗೆ ಕೆಂಗೇರಿ ಠಾಣೆಯಲ್ಲಿ ದೂರು ದಾಖಲಾಯಿತು.

ಚಳಗೇರಿ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟ್ರೋಲ್ ಮಾಡಲಾಗಿದೆ. ದೂರುದಾರರಲ್ಲಿ ಒಬ್ಬರಾದ ಕೆಎಚ್‌ಬಿ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್ ಸುದರ್ಶನ್, 'ಘಟನೆ ಆಗಸ್ಟ್ 9 ರಂದು ನಡೆದಿದ್ದು, ಆಗಸ್ಟ್ 10 ರಂದು ಕೆಂಗೇರಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

'ಮಾನವಶಕ್ತಿ ಕೊರತೆ, ಸ್ವಾತಂತ್ರ್ಯ ದಿನಾಚರಣೆಗೆ ಭದ್ರತಾ ವ್ಯವಸ್ಥೆ ನೋಡಿಕೊಳ್ಳುವುದು ಮತ್ತು ನಾಲ್ಕು ದಿನಗಳಿಂದ ನಾನು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಎಫ್‌ಐಆರ್ ಬಾಕಿ ಉಳಿದಿದೆ. ಇನ್ನೆರಡು ದಿನದಲ್ಲಿ ನೋಂದಣಿಯಾಗಲಿದೆ’ ಎಂದು ಸುದರ್ಶನ್ ತಿಳಿಸಿದರು.

ದೂರುದಾರರಿಂದ ಹೆಚ್ಚಿನ ಸಾಕ್ಷ್ಯಗಳು ಲಭ್ಯವಾಗಿಲ್ಲದ ಕಾರಣ ಎಫ್‌ಐಆರ್ ಬಾಕಿ ಇದೆ ಎಂದು ಕೆಂಗೇರಿ ಪೊಲೀಸರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಅನಿಲ್ ಚಳಗೇರಿ ಅವರು ಸಕ್ರಿಯರಾಗಿದ್ದರು ಮತ್ತು ಕೊಮ್ಮಘಟ್ಟದಲ್ಲಿ ಸಿದ್ಧತೆಗಳನ್ನು ಗಮನಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT