ಕೆ ಎಸ್ ಈಶ್ವರಪ್ಪ 
ರಾಜ್ಯ

ಹಿಂದೂ ಸಮಾಜ ಮೇಲೆದ್ದರೆ ರಾಷ್ಟ್ರವಿರೋಧಿ ಮುಸ್ಲಿಂ ಗೂಂಡಾಗಳು ಉಳಿಯುವುದಿಲ್ಲ, ಎಸ್ ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು: ಕೆ ಎಸ್ ಈಶ್ವರಪ್ಪ

ಕರ್ನಾಟಕದಲ್ಲಿ ಹಿಂದೂ ಸಮಾಜ ಮೇಲೆದ್ದರೆ ರಾಷ್ಟ್ರವಿರೋಧಿ ಮುಸ್ಲಿಂ ಗೂಂಡಾಗಳು ಉಳಿಯುವುದಿಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಹಿಂದೂ ಸಮಾಜ ಮೇಲೆದ್ದರೆ ರಾಷ್ಟ್ರವಿರೋಧಿ ಮುಸ್ಲಿಂ ಗೂಂಡಾಗಳು ಉಳಿಯುವುದಿಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

 ನಿನ್ನೆ ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲ ಮುಸ್ಲಿಮರೂ ಗೂಂಡಾಗಳು ಎಂದು ಹೇಳುವುದಿಲ್ಲ. ಆದರೆ ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು.

ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ತಮ್ಮ ಸಮುದಾಯದ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದ ಹಿರಿಯ ಸದಸ್ಯರಲ್ಲಿ ನಾನು ವಿನಂತಿಸುತ್ತೇನೆ. ಹಿಂದೂ ಸಮಾಜ ಉದಯಿಸಿದರೆ ಇಂತಹ ಚಟುವಟಿಕೆಗಳಿಗೆ ಉಳಿಗಾಲವಿಲ್ಲ ಎಂದು ಹಿಂದೂ ಯುವಕನ ಮೇಲೆ ಚೂರಿ ಇರಿದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 

ಪ್ರತಿಪಕ್ಷಗಳು ಹಿಂದೂ-ಮುಸ್ಲಿಂ ಗಲಭೆ ತಂದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಇದು ಎಂದಿಗೂ ಈಡೇರುವುದಿಲ್ಲ. ಶಿವಮೊಗ್ಗ ಜನರಿಗೆ ಸಿಟ್ಟು ಬಂದಿದೆ. ಶಿವಮೊಗ್ಗದಲ್ಲಿ ಸ್ಥಳೀಯ ಹಿಂದೂ-ಮುಸ್ಲಿಮರು ಅಣ್ಣತಮ್ಮಂದಿರಂತೆ ಬಾಳುತ್ತಿದ್ದಾರೆ. ಆದರೆ ಕೇರಳ ಮತ್ತು ಇತರ ರಾಜ್ಯಗಳಿಂದ ಬರುವ ಎಸ್​ಡಿಪಿಐ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಗಲಭೆ ಹಬ್ಬಿಸಲು ಯತ್ನಿಸುತ್ತಿದ್ದಾರೆ. ಇದು ಎಂದಿಗೂ ಯಶಸ್ವಿಯಾಗುವುದಿಲ್ಲ. ಶಿವಮೊಗ್ಗ ಗಲಭೆಗೆ ಕಾಂಗ್ರೆಸ್​ ಕಾರ್ಪೊರೇಟರ್​ ಗಂಡನೇ ಕಾರಣ. ಬಿಜೆಪಿ ಮೇಲೆ ಅರೋಪ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕದಲ್ಲಿ SDPI ಮತ್ತು PFI ನಿಷೇಧಿಸಬೇಕು. ಈ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನು ಮಾಡಲಿದೆ ಎಂದು ನೋಡಬೇಕು ಎಂದರು.

ಶಿವಮೊಗ್ಗ ನಗರದಲ್ಲಿ ಸರ್ಕಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ನಂತರ ನಡೆದ ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಾಕಷ್ಟು ಜನರು ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಎಲ್ಲರೂ ಮನೆಗಳಿಗೆ ಹೋದೆವು. ಅಷ್ಟರೊಳಗೆ ಕೆಲ ಕಿಡಿಗೇಡಿಗಳು ಸಾರ್ವಕರ್ ಪೋಟೊ ಹರಿದು ಹಾಕಿದ್ದರು. ಎಸ್​ಡಿಪಿ ಕಾರ್ಯಕರ್ತರ ಈ ಕೃತ್ಯದಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿತು ಎಂದು ಹೇಳಿದರು.

ಶಿವಮೊಗ್ಗದ ಗಾಂಧಿಬಜಾರ್​ನಲ್ಲಿ ಪ್ರೇಮಸಿಂಗ್ ಹಾಗೂ ಶರವಣ ಹೋಗುತ್ತಿರುವಾಗ ಸುಮಾರು ಆರು ಮಂದಿ ಮುಸ್ಲಿಂ ಗುಂಡಾಗಳು ಪ್ರೇಮ್ ಸಿಂಸ್​ಗೆ ಚಾಕು ಹಾಕಿದರು. ಅವರ ನರಗಳು ಘಾಸಿಯಾಗಿರುವುದರಿಂದ ಉಳಿಯುವುದು ಕಷ್ಟ ಎನ್ನುತ್ತಿದ್ದಾರೆ. ಪೊಲೀಸರು ಬಹಳ ಶ್ರಮದಿಂದ ಅಪರಾಧಿಗಳನ್ನು ಹುಡುಕುತ್ತಿದ್ದಾರೆ. ಈ ವೇಳೆ ಒಬ್ಬನ ಮೇಲೆ ಗುಂಡು ಹಾರಿಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂದು ವಿವರಿಸಿದರು.

ಕರ್ನಾಟಕದಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಎಸ್​ಡಿಪಿಐ ಸಂಘಟನೆಯ ಮನೋಭಾವ ಇಂದಿಗೂ ಬದಲಾಗಿಲ್ಲ. ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಗೆ ಅವರು ಬಂದಿದ್ದಾರೆ. ನಮ್ಮ ಶಿವಮೊಗ್ಗದವರು ಶಾಂತಿಪ್ರಿಯರು. ಅಲ್ಲಿನ ಸ್ಥಳೀಯರ ಮುಸ್ಲಿಮರ ಬಗ್ಗೆ ನಮಗೆ ಆಕ್ಷೇಪವಿಲ್ಲ. ಆದರೆ ಕೊಲೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡುವ ಪ್ರಕರಣಗಳು ಎಲ್ಲಿಯೂ ಆಗಬಾರದು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT