ರಾಜ್ಯ

ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 608 ಸೇರಿ ರಾಜ್ಯದಲ್ಲಿ 886 ಮಂದಿಗೆ ಪಾಸಿಟಿವ್; 3 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 886 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,34,496ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40,155ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 608 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,54,238ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,999 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,85,535ಕ್ಕೆ ಏರಿಕೆಯಾಗಿದೆ. ಇನ್ನು 8,764 ಸಕ್ರಿಯ ಪ್ರಕರಣಗಳಿವೆ.

SCROLL FOR NEXT