ರಾಜ್ಯ

ಸಾವರ್ಕರ್ - ಟಿಪ್ಪು ಫೋಟೋ ವಿವಾದ: ನಿಷೇಧಾಜ್ಞೆ ತೆರವು, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ

Nagaraja AB

ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್- ಮೈಸೂರು ಹುಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಹಿಂದೂ-ಮುಸ್ಲಿಂ ಕೋಮುಗಳ ಮಧ್ಯೆ ಗಲಾಟೆ ನಡೆದು ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

ಸ್ವಾತಂತ್ರ್ಯ ದಿನ ನಗರದ ಎಎ ಸರ್ಕಲ್​ನಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ ಕಾರಣಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಯೂವಕ  ಪ್ರೇಮ್ ಸಿಂಗ್  ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ಶಾಂತಿ ಸುವ್ಯವಸ್ಥೆ ಕಾಪಾಡಲು ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿತ್ತು. ಇದರಿಂದಾಗಿ ಅಂಗಡಿಗಳು ಬಂದ್​ ಆಗಿದ್ದವು.

ಇದೀಗ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿದ್ದು ಶಾಲಾ- ಕಾಲೇಜುಗಳು ಪುನರಾರಂಭಗೊಂಡಿವೆ. ಅಂಗಡಿ, ಮುಂಗಟ್ಟುಗಳು ಮತ್ತೆ ಆರಂಭವಾಗಿದ್ದು, ವ್ಯಾಪಾರ- ವಹಿವಾಟು ಎಂದಿನಂತೆ ಸಾಗಿದೆ. ಆಟೋ, ಕಾರು, ಬಸ್ ಗಳ ಓಡಾಟ ಸಾಗಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಸ್ಕೂಟರ್ ನಲ್ಲಿ ಹಿಂಬದಿ ಪ್ರಯಾಣಿಕರಿಗೆ ಅವಕಾಶ ನೀಡಿಲ್ಲ. 

SCROLL FOR NEXT