ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲೆಗೆ ತಡವಾಗಿ ಬರುವ ಶಿಕ್ಷಕರ ವಿರುದ್ಧ ಕ್ರಮ: ಸಚಿವ  ಬಿ.ಸಿ ನಾಗೇಶ್

ಶಾಲಾ ಅವಧಿಯಲ್ಲಿ ಅನಧಿಕೃತವಾಗಿ ಗೈರು ಹಾಜರಾಗುವ, ತಡವಾಗಿ ತರಗತಿಗಳಿಗೆ ಬರುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಮಿತಿ ಸಚಿವ ಬಿ.ಸಿ.ನಾಗೇಶ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಶಾಲಾ ಅವಧಿಯಲ್ಲಿ ಅನಧಿಕೃತವಾಗಿ ಗೈರು ಹಾಜರಾಗುವ, ತಡವಾಗಿ ತರಗತಿಗಳಿಗೆ ಬರುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಮಿತಿ ಸಚಿವ ಬಿ.ಸಿ.ನಾಗೇಶ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ರಾಜ್ಯದ ಶಿಕ್ಷಕರಿಗೆ ಸೂಚಿಸಿದ್ದಾರೆ ವಿನಾಕಾರಣ ತಡವಾದರೆ ಮಕ್ಕಳಿಗೆ ಶಾಲೆಯ ಹೊರಗಡೆ ಕಾಯಿಸಿದರೆ ಈ ಒಂದು ವಿಚಾರ ಕುರಿತು ಮಾಹಿತಿ ವರದಿಗಳು ಬಂದರೆ ಕೂಡಲೇ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಶಿಕ್ಷಕರ ಕಾರ್ಯ ವೈಖರಿ ಕುರಿತು ಶಿಕ್ಷಣ ಸಚಿವರು ಮೆಚ್ಚುಗೆ ಯನ್ನು ವ್ಯಕ್ತಪಡಿಸಿದ್ದಾರೆ ಈ ನಡುವೆ ಶಾಲೆಗಳಿಗೆ ತಡವಾಗಿ ಬರುವ ಶಿಕ್ಷಕರಿಗೆ ಇದೇ ವೇಳೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಹಿಂದೆ ಅನಿರೀಕ್ಷಿತವಾಗಿ ಶಾಲೆಯೊಂದಕ್ಕೆ ಭೇಟಿ ನೀಡಿದ ಸಚಿವ ಬಿ ಸಿ ನಾಗೇಶ್ ಈ ಒಂದು ಸೂಚನೆ ಯನ್ನು ರಾಜ್ಯದ ಶಿಕ್ಷಕರಿಗೆ ನೀಡಿದ್ದಾರೆ.

ನಾಗಮಂಗಲ ತಾಲ್ಲೂಕು ನೆಲ್ಲಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈಚೆಗೆ ಭೇಟಿ ಕೊಟ್ಟಾಗ ಯಾವ ಶಿಕ್ಷಕರೂ ಶಾಲೆಗೆ ಬಂದಿರಲಿಲ್ಲ. ಮಕ್ಕಳು ಶಾಲಾ ಆವರಣದಲ್ಲೇ ಕುಳಿತಿದ್ದರು. ಸುಮಾರು 10.30 ಆದರೂ  ಮಕ್ಕಳು ಅಲ್ಲಿಯವರೆಗೂ ಶಾಲೆಯಿಂದ ಹೊರಗೆ ಕಾಯುತ್ತಿದ್ದರು. ಇಂತಹ ಘಟನೆಗಳು ಶಿಕ್ಷಕರಿಗೆ ಶೋಭೆ ತರುವುದಿಲ್ಲ.

ರಾಜ್ಯದ ಯಾವ ಶಾಲೆಗಳಲ್ಲೂ ಇಂತಹ ಘಟನೆಗಳು ಮರುಕಳಿಸಬಾರದು. ಮಕ್ಕಳ ಬೋಧನೆ, ಸುರಕ್ಷತೆಗೆ ಅಡ್ಡಿಯಾಗುವ ಶಿಕ್ಷಕರ ನಡೆ ಕ್ಷಮಿಸಲು ಸಾಧ್ಯವಿಲ್ಲ. ಶಿಸ್ತುಕ್ರಮ ಜರುಗಿಸಬೇಕು ಎಂದು ತಾಕೀತು ಮಾಡಿದ್ದಾರೆ. ಶಿಕ್ಷಣದಿಂದ ವಂಚಿತರಾಗುವುದಲ್ಲದೆ ಮಕ್ಕಳ ಸುರಕ್ಷತೆಗೂ ಧಕ್ಕೆಯಾಗಿದೆ. ಹೀಗಾಗಿ ಈ ನಿರ್ದೇಶನ ನೀಡಲಾಗುತ್ತಿದೆ ಎಂದು ನಾಗೇಶ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT