ರಾಜ್ಯ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಪ್ರಮುಖ ಆರೋಪಿಗಳು ಆರು ದಿನ ಎನ್ ಐಎ ಕಸ್ಟಡಿಗೆ

Nagaraja AB

ಮಂಗಳೂರು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಐವರು ಪ್ರಮುಖ ಆರೋಪಿಗಳನ್ನು ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದೆ.

ರಾಜ್ಯ ಪೊಲೀಸರು ಕಸ್ಟಡಿ ತನಿಖೆಯನ್ನು ಆಗಸ್ಟ್ 16 ರಂದು ಪೂರ್ಣಗೊಳಿಸಿದ ನಂತರ, ಆಗಸ್ಟ್ 23ರವರೆಗೂ ಆರೋಪಿಗಳನ್ನು ತನ್ನ ವಶಕ್ಕೆ ನೀಡುವಂತೆ ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾಗಿ  ಅಧಿಕಾರಿಗಳು ತಿಳಿಸಿದ್ದಾರೆ.

ಜುಲೈ 26 ರಂದು ನಡೆದಿದ್ದ  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳಾದ ನೌಪಾಲ್ (28) ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಜ್ (27) ಅವರನ್ನು ಎನ್ ಐಎ ಕಸ್ಟಡಿಗೆ ಪಡೆದುಕೊಂಡಿದೆ.

ಕೊಲೆಗೆ ಸಂಬಂಧಿಸಿದಂತೆ ಸುಳ್ಯದ ಬೆಳ್ಳಾರೆ ಪೊಲೀಸರು ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಗಿತ್ತು.

ಜುಲೈ 26 ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಚಿಕನ್ ಸ್ಟಾಲ್ ಮುಚ್ಚಿ ಮನೆಗೆ ಮರಳಲು ಮುಂದಾದಾಗ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿತ್ತು. 

SCROLL FOR NEXT