ಕೋವಿಡ್-19 ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 965 ಸೇರಿ ರಾಜ್ಯದಲ್ಲಿ 1,713 ಮಂದಿಗೆ ಪಾಸಿಟಿವ್; 4 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,713 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,40,111ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,713 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,40,111ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,166ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 965 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,57,744ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,034 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,89,148ಕ್ಕೆ ಏರಿಕೆಯಾಗಿದೆ. ಇನ್ನು 10,452 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT