ತುಮಕೂರು: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅವಿನಾಶ್(28), ಪ್ರಣತಿ(5), ಸೌಖ್ಯ(3) ಮೃತ ದುರ್ದೈವಿಗಳು. ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಅಥಣಿ: 60 ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್- ಕಂಟೈನರ್ ಮುಖಾಮುಖಿ ಡಿಕ್ಕಿ: ಚಾಲಕರು ಸ್ಥಳದಲ್ಲೇ ಸಾವು
ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಾಳು ಬಾಲಕಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.