ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, 65 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ

ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ.

ಸಾಂದರ್ಭಿಕ ಚಿತ್ರ
Nagaraja AB
Updated On : 21 Aug 2022, 5:19 pm

ಶಿವಮೊಗ್ಗ: ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 65 ವರ್ಷದ ವೃದ್ಧರೊಬ್ಬರಿಗೆ ಇಲ್ಲಿನ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿ ನಾಗಪ್ಪನಿಗೆ ರೂ. 60,000 ದಂಡವನ್ನು ಹಾಕಲಾಗಿದೆ.

ಆರೋಪಿ ನಾಗಪ್ಪ 2020 ಸೆಪ್ಟೆಂಬರ್ 13 ರಂದು  ಶಿವಮೊಗ್ಗ ತಾಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದ. ಅಪ್ರಾಪ್ತ ಬಾಲಕಿ ಕೃಷಿ ಜಮೀನಿಗೆ ಹೋದಾಗ ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಸಂಬಂಧ ಮಹಿಳಾ ಪೊಲೀಸರು ನಾಗಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದರು. ಮಹಿಳಾ ಠಾಣೆ ಇನ್ಸ್ ಪೆಕ್ಟರ್ ಅಭಯ್ ಪ್ರಕಾಶ್ ಸೊಮಾನಲ್ ವಿಚಾರಣೆ ನಡೆಸಿ, ನಾಗಪ್ಪ ವಿರುದ್ಧ ಜಾರ್ಜ್ ಶೀಟ್ ದಾಖಲಿಸಿದ್ದರು. 

ಪ್ರಾಸಿಕ್ಯೂಸನ್ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಹರಿ ಪ್ರಸಾದ್ ವಾದಿಸಿದರು. ಪೊಕ್ಸೋ ಕಾಯ್ದೆ 2012ರ ಸೆಕ್ಷನ್ 6ರ ಅಡಿಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಜೆ ಎಸ್ ಮೋಹನ್ ನಾಗಪ್ಪ ಅವರನ್ನು ದೋಷಿ ಎಂದು ಪರಿಗಣಿಸಿ, ಶನಿವಾರ ತೀರ್ಪು ಪ್ರಕಟಿಸಿದರು.

Advertisement

Advertisement

ಆರೋಪಿ ಒಂದು ವೇಳೆ ದಂಡ ಪಾವತಿಸುವಲ್ಲಿ ವಿಫಲನಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಕಾಲ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments