ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: 11 ವರ್ಷದ ಬಾಲಕಿಯನ್ನು ಚೂರಿ ಇರಿದು ಕೊಂದು, ಆತ್ಮಹತ್ಯೆಗೆ ಶರಣಾದ ಸ್ಟೀಲ್ ಫ್ಯಾಕ್ಟರಿ ಉದ್ಯೋಗಿ!

ದಾಬಸ್ ಪೇಟೆಯ ಉಕ್ಕು ತಯಾರಿಕಾ ಕಾರ್ಖಾನೆಯ ಉದ್ಯೋಗಿಯೊಬ್ಬ 11 ವರ್ಷದ ಬಾಲಕಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ದಾಬಸ್ ಪೇಟೆಯ ಉಕ್ಕು ತಯಾರಿಕಾ ಕಾರ್ಖಾನೆಯ ಉದ್ಯೋಗಿಯೊಬ್ಬ 11 ವರ್ಷದ ಬಾಲಕಿಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ಕ್ವಾರ್ಟರ್ಸ್ ಆವರಣದಲ್ಲಿ ಇಂದು ನಡೆದಿದೆ. 

ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಬಾಲಕಿ ಆರೋಪಿಸಿದ್ದು, ಇದರಿಂದ ಕೋಪಗೊಂಡ ನಂದ ಕಿಶೋರ್ ಎಂಬಾತ ತನ್ನ ಸಹೋದ್ಯೋಗಿ ಲಕ್ಷ್ಮಣ್ ಸಿಂಗ್ ಎಂಬುವರ ಪುತ್ರಿ ಖುಷಿಯನ್ನು ಚೂಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇಬ್ಬರೂ ಉತ್ತರಾಖಂಡ್ ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಒಂದೇ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು.

ಖುಷಿ ತನ್ನ ಹೆತ್ತವರೊಂದಿಗೆ ಎರಡನೇ ಮಹಡಿಯಲ್ಲಿ ವಾಸಿಸುತ್ತಿದ್ದರೆ, ಕಿಶೋರ್ ನೆಲ ಮಹಡಿಯಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಖುಷಿ ಖಾಸಗಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದಳು. ತುಂಬಾ ಚುರುಕಿನ ಹುಡುಗಿಯಾಗಿದ್ದ ಬಾಲಕಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದುದನ್ನು ಕಿಶೋರ್ ಗಮನಿಸಿದ್ದ. ಅವನು ಅವಳೊಂದಿಗೆ ಒಂದೆರಡು ಬಾರಿ ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದನು. 

ಈ ವಿಚಾರವನ್ನು ಬಾಲಕಿ ಹೆತ್ತವರಿಗೆ ದೂರು ನೀಡಿದ್ದಳು. ನಂತರ ಕ್ವಾರ್ಟರ್ಸ್ನ ನಿವಾಸಿಗಳ ಸಂಘಕ್ಕೆ ತಿಳಿಸಿದಳು. ಅಸೋಸಿಯೇಷನ್ ​​ಎಚ್ಚರಿಕೆಯ ನಂತರ ಕ್ವಾರ್ಟರ್ಸ್ ಖಾಲಿ ಮಾಡುವಂತೆ ನಂದ ಕಿಶೋರ್ ಗೆ ತಿಳಿಸಿದ್ದರು. ಇದರಿಂದ ಅಸಮಾಧಾನಗೊಂಡ ಆತ ಬಾಲಕಿಯ ಕುಟುಂಬದ ವಿರುದ್ಧ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದನು.

ಇಂದು ಮಧ್ಯಾಹ್ನ 2.30ರ ಸುಮಾರಿಗೆ ಬಾಲಕಿಯ ಮನೆಯ ಸಮೀಪದಲ್ಲಿದ್ದು ಕಂಡು ಆಕೆಯ ಕುತ್ತಿಗೆ ಮತ್ತು ಹೊಟ್ಟೆಯ ಮೇಲೆ ಪದೇ ಪದೇ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ನಿವಾಸಿಗಳು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ತಾನು ಸಹ ಇರಿದುಕೊಂಡು ಮೃತಪಟ್ಟಿದ್ದಾನೆ. ಮಾದನಾಯಕನಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT