ರಾಜ್ಯ

KPTCL ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ತಂದೆ, ಮಗನನ್ನು ಬಂಧಿಸಿದ ಪೊಲೀಸರು

Vishwanath S

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಮುನ್ಸಿಪಲ್ ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ, ಅವರ ಪುತ್ರ ಸಮೀತ್ ಕುಮಾರ್ ನನ್ನು ಬಂಧಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆದಿದ್ದ ಪರೀಕ್ಷೆ ಪತ್ರಿಕೆ ಸೋರಿಕೆ ಆಗಿತ್ತು. ಗದಗದ ಮುನ್ಸಿಪಲ್ ಕಾಲೇಜ್ ನಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಪರೀಕ್ಷೆ ನಡೆದಿತ್ತು.

ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದ ಸಮೀತ್ ಕುಮಾರ್ ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದು ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂದು ಶಂಕಿಸಲಾಗಿದೆ. 

2022ರ ಆಗಸ್ಟ್ 7ರ ಭಾನುವಾರ ಗದಗ-ಬೆಟಗೇರಿ ಅವಳಿ ನಗರದಲ್ಲಿ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಆ ಪೈಕಿ ಮುನ್ಸಿಪಲ್ ಕಾಲೇಜ್ ನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು.

SCROLL FOR NEXT