ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೊಬೈಲ್ ಚಾರ್ಜರ್‌ ಕ್ಯಾಮೆರಾದಿಂದ ನಗ್ನ ಚಿತ್ರ ಶೂಟಿಂಗ್ ಮಾಡಿ ಮಹಿಳೆಗೆ ಬ್ಲ್ಯಾಕ್‌ಮೇಲ್; ಯುವಕ ಅರೆಸ್ಟ್

ಮಹಿಳೆ ಬಟ್ಟೆ ಬದಲಿಸುವ ವಿಡಿಯೋವನ್ನು ಸ್ಪೈ ಕ್ಯಾಮೆರಾದಲ್ಲಿ ಸೆರೆಹಿಡಿದು ದೈಹಿಕ ಸಂಬಂಧ ಹೊಂದುವಂತೆ ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮಹಿಳೆ ಬಟ್ಟೆ ಬದಲಿಸುವ ವಿಡಿಯೋವನ್ನು ಸ್ಪೈ ಕ್ಯಾಮೆರಾದಲ್ಲಿ ಸೆರೆಹಿಡಿದು ದೈಹಿಕ ಸಂಬಂಧ ಹೊಂದುವಂತೆ ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ವಿ. ಮಹೇಶ್ (30) ಎಂಬಾತನನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಟಿ. ನರಸೀಪುರದ ಮಹೇಶ್, ಈಶಾನ್ಯ ವಿಭಾಗ ವ್ಯಾಪ್ತಿಯಲ್ಲಿ ವಾಸವಿದ್ದ ಮಹಿಳೆಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ.

ಮಹಿಳೆ ಹಾಗೂ ಅವರ ಕುಟುಂಬದವರನ್ನು ಮಾತನಾಡಿಸುವ ಸೋಗಿನಲ್ಲಿ ಆರೋಪಿ ಮನೆಗೆ ತೆರಳಿದ್ದ. ಮಹಿಳೆ ಮಲಗುತ್ತಿದ್ದ ಕೊಠಡಿ ಸ್ವಿಚ್ ಬೋರ್ಡ್‌ಗೆ ಮೊಬೈಲ್ ಜಾರ್ಜರ್‌ ಹಾಕಿ ವಾಪಸು ಹೋಗಿದ್ದ. ಇದೇ ಸಂದರ್ಭದಲ್ಲೇ ಮಹಿಳೆಯ ನಗ್ನ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಕೆಲ ದಿನ ಬಿಟ್ಟು ಮನೆಗೆ ಪುನಃ ತೆರಳಿದ್ದ ಆರೋಪಿ, ಚಾರ್ಜರ್‌ ತೆಗೆದುಕೊಂಡು ಹೋಗಿದ್ದ, ಈ ಬಗ್ಗೆ ತನಗೆ ಮಾಹಿತಿಯೇ ಇರಲಿಲ್ಲ ಎಂದು ತಿಳಿಸಿದ್ದಾರೆ.

ದೂರುದಾರ ಮಹಿಳೆಗೆ ಪರಿಚಯಸ್ಥನಾಗಿದ್ದ ಆರೋಪಿ, ಆಗಾಗ ಮನೆಗೂ ಬಂದು ಹೋಗುತ್ತಿದ್ದ. ಮಹಿಳೆ ಜೊತೆ ಲೈಂಗಿಕವಾಗಿ ಸಲುಗೆ ಬೆಳೆಸಿಕೊಳ್ಳಲು ಮುಂದಾಗಿದ್ದ. ಆದರೆ, ಮಹಿಳೆ ನಿರಾಕರಿಸಿದ್ದರು. ಇದರಿಂದ ಸಿಟ್ಟಾದ ಆರೋಪಿ, ಮಹಿಳೆಯ ನಗ್ನ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಸಂಚು ರೂಪಿಸಿದ್ದ ಎಂದು ತಿಳಿಸಿವೆ.

ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ ಆ್ಯಪ್‌ನಲ್ಲಿ ನಕಲಿ ಖಾತೆ ತೆರೆದಿದ್ದ ಆರೋಪಿ, ಮಹಿಳೆಯ ಖಾತೆಗೆ ಸಂದೇಶ ಕಳುಹಿಸುತ್ತಿದ್ದ. ಅಪರಿಚಿತನ ಖಾತೆ ಆಗಿದ್ದರಿಂದ ಮಹಿಳೆ ಬ್ಲಾಕ್ ಮಾಡಿದ್ದರು. ಆರೋಪಿಯು ಮತ್ತೊಂದು ನಕಲಿ ಖಾತೆ ತೆರೆದು ಸಂದೇಶ ಕಳುಹಿಸಲಾರಂಭಿಸಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.

ನನ್ನ ಜೊತೆ ಲೈಂಗಿಕವಾಗಿ ಸಲುಗೆ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ, ನಿಮ್ಮ ನಗ್ನ ವಿಡಿಯೊಗಳು ನನ್ನ ಬಳಿ ಇವೆ. ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುತ್ತೇನೆ’ ಎಂದು ಆರೋಪಿ ಹೇಳಿದ್ದ. ಅದಕ್ಕೆ ತಲೆಕೆಡಿಸಿಕೊಳ್ಳದ ಮಹಿಳೆಯು ಸಂದೇಶಕ್ಕೆ ಉತ್ತರ ನೀಡಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿ, ನಗ್ನ ದೃಶ್ಯದ ತುಣುಕು ಕಳುಹಿಸಿದ್ದ. ಹೆದರಿದ್ದ ಮಹಿಳೆ, ಕುಟುಂಬದವರಿಗೆ ವಿಷಯ ತಿಳಿಸಿ ಠಾಣೆಗೆ ದೂರು ನೀಡಿದ್ದರು. ಮಹಿಳೆ ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಮೊಬೈಲ್ ಚಾರ್ಜರ್ ಮಾದರಿಯ ರಹಸ್ಯ ಕ್ಯಾಮೆರಾ, ಲ್ಯಾಪ್‌ಟಾಪ್, 2 ಮೆಮರಿ ಕಾರ್ಡ್, ಪೆನ್‌ ಡ್ರೈವ್ ಹಾಗೂ ಎರಡು ಮೊಬೈಲ್ ಜಪ್ತಿ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video