ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 931 ಸೇರಿ ರಾಜ್ಯದಲ್ಲಿ 1,268 ಮಂದಿಗೆ ಪಾಸಿಟಿವ್; 6 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,268 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,42,099ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,268 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,42,099ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,174ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ತಡವಾಗಿ ಆಸ್ಪತ್ರೆಗೆ ದಾಖಲು, 2ನೇ ಡೋಸ್ ಲಸಿಕೆ ಪರಿಣಾಮದ ಕ್ಷೀಣಿಸುವಿಕೆ ಕೋವಿಡ್ ಸಾವು ಹೆಚ್ಚಳಕ್ಕೆ ಕಾರಣ; ರಾಜ್ಯ ಆರೋಗ್ಯ ಇಲಾಖೆ
ಬೆಂಗಳೂರಿನಲ್ಲಿ ಇಂದು 931 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,58,948ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1,229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,91,342ಕ್ಕೆ ಏರಿಕೆಯಾಗಿದೆ. ಇನ್ನು 10,541 ಸಕ್ರಿಯ ಪ್ರಕರಣಗಳಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.