ಎಸಿಬಿ ಸಾಂದರ್ಭಿಕ ಚಿತ್ರ 
ರಾಜ್ಯ

ಎಸಿಬಿ ರದ್ದು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಮುಂಗೆ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ.  ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

ಇದಕ್ಕು ಮುನ್ನ ರಾಜ್ಯ ಸರ್ಕಾರವೇ ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿತ್ತು. ಆದರೆ ಈ ವರದಿಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,  "ಖಾಸಗಿ ಮೇಲ್ಮನವಿ ಅರ್ಜಿ ದಾಖಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ರದ್ದುಗೊಳಿಸಿದ್ದು, ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್