ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,255 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,44,819ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,179ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್ ಡಾಕ್ಯುಮೆಂಟ್ ಬಿಡುಗಡೆ, ಇದು ದೇಶದಲ್ಲೇ ಪ್ರಥಮ: ಸಚಿವ ಡಾ. ಕೆ.ಸುಧಾಕರ್
ಬೆಂಗಳೂರಿನಲ್ಲಿ ಇಂದು 747 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,60,682ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 2,186 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,94,823ಕ್ಕೆ ಏರಿಕೆಯಾಗಿದೆ. ಇನ್ನು 9,775 ಸಕ್ರಿಯ ಪ್ರಕರಣಗಳಿವೆ.