ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಮಸ್ಯೆಗೆ ಪರಿಹಾರ ಕೇಳಲು ಬಂದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಜ್ಯೋತಿಷಿ ಪರಾರಿ

ಸಮಸ್ಯೆಗೆ ಪರಿಹಾರ ಕೇಳಲು ಬಂದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಸ್ವಯ ಘೋಷಿತ ಜ್ಯೋತಿಷಿಯೊಬ್ಬ ತನ್ನ ಆಶ್ರಮದಿಂದ ಪರಾರಿಯಾಗಿದ್ದಾನೆ.

ಬೆಂಗಳೂರು: ಸಮಸ್ಯೆಗೆ ಪರಿಹಾರ ಕೇಳಲು ಬಂದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಸ್ವಯ ಘೋಷಿತ ಜ್ಯೋತಿಷಿಯೊಬ್ಬ ತನ್ನ ಆಶ್ರಮದಿಂದ ಪರಾರಿಯಾಗಿದ್ದಾನೆ.

ಆವಲಹಳ್ಳಿಯಲ್ಲಿ ಆಶ್ರಮ ನಡೆಸುತ್ತಿರುವ ಆನಂದ್ ಮೂರ್ತಿ (52) ಪರಾರಿಯಾಗಿರುವ ಜ್ಯೋತಿಷಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ತಿಂಗಳ ಹಿಂದೆ ತಮ್ಮ ಸಮಸ್ಯೆಗೆ ಪರಿಹಾರ ಕೇಳಿಕೊಂಡು ಆನಂದ ಮೂರ್ತಿಯನ್ನು ಸಂಪರ್ಕಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಸಮಸ್ಯೆಯನ್ನು ಪರಿಹರಿಸುವ ದೇವಿಯನ್ನು ತಾನು ಪೂಜಿಸುತ್ತಿದ್ದೇನೆ ಎಂದು ಮೂರ್ತಿ ಹೇಳಿಕೊಂಡಿದ್ದ. ಆಕೆಯ  ಪರಿಸ್ಥಿತಿಯ ಲಾಭ ಪಡೆದ ಆತ ಲೈಂಗಿಕವಾಗಿ ಬಳಸಿಕೊಂಡಿದ್ದ. ಆಕೆಗೆ ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ್ದ.

ಅತ್ಯಾಚಾರವೆಸಗಿದ್ದ ವಿಡಿಯೋ ರೆಕಾರ್ಡ್ ಮಾಡಿದ್ದ ಆನಂದ ಮೂರ್ತಿ ಅದನ್ನು ಸಂತ್ರಸ್ತೆಯ ಪ್ರಿಯಕರನಿಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ.

ದೂರಿನ ಆಧಾರದ ಮೇಲೆ ಕೆಆರ್ ಪುರಂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಆಶ್ರಮದಿಂದ ಪರಾರಿಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT