ರಾಜ್ಯ

ಬಿಬಿಎಂಪಿ ಆಸ್ಪತ್ರೆ ಸೇರಿದಂತೆ ಬೆಂಗಳೂರಿನ ಹಲವು ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

Lingaraj Badiger

ಬೆಂಗಳೂರು: ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಸ್ಪತ್ರೆಗಳು ಸೇರಿದಂತೆ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಮೂಲ ಸೌಕರ್ಯಗಳ ಕೊರತೆ, ನಿರ್ವಹಣೆಯಲ್ಲಿನ ಲೋಪ, ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ, ಔಷಧಗಳ ವಿತರಣೆ ಮತ್ತು ಇತರ ಕುಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿತು.

ನಗರದ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಹಲವು ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಇಂದು ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿದೆ.

ಇತ್ತೀಚಿಗಷ್ಟೇ ಭ್ರಷ್ಟಾಚಾರವನ್ನು ಪರಿಶೀಲಿಸಲು ನಗರದ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಸಾಮೂಹಿಕ ಹಠಾತ್ ಭೇಟಿ ನೀಡಿ, ಪರಿಶೀಲನೆ ನಡೆಸಿತ್ತು.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ರಚಿಸಿದ 10 ತಂಡಗಳು ಇಂದು ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಕೆಸಿ ಜನರಲ್ ಆಸ್ಪತ್ರೆ, ಮಿಂಟೋ ಕಣ್ಣಿನ ಆಸ್ಪತ್ರೆ, ವಾಣಿವಿಲಾಸ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಡಾ.ಬಾಬು ಜಗಜೀವನರಾಮ್ ನಗರ ಜನರಲ್ ಆಸ್ಪತ್ರೆ, ಹಲಸೂರು ರೆಫರಲ್ ಆಸ್ಪತ್ರೆ, ಎಚ್. ಸಿದ್ದಯ್ಯ ರಸ್ತೆ ರೆಫರಲ್ ಆಸ್ಪತ್ರೆಗಳಿ ಭೇಟಿ ನೀಡಿ, ಪರಿಶೀಲನೆ ನಡೆಸಿವೆ.

SCROLL FOR NEXT