ಅಶ್ವತ್ಥನಾರಾಯಣ 
ರಾಜ್ಯ

ಕರ್ನಾಟಕ ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು; 8 ನೂತನ ವಿವಿ ಸ್ಥಾಪನೆಗೆ ಹಾದಿ ಸುಗಮ

ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು...

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಿ ನಡೆಯಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದಿದ್ದಾರೆ.

ಹೊಸ ವಿ.ವಿ.ಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿ.ವಿ.ಯಲ್ಲಿ 18,  ಹಾಸನ ವಿ.ವಿ.ಯಲ್ಲಿ 36, ಹಾವೇರಿ 40, ಬೀದರ್ 140,  ಕೊಡಗು 24,  ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿಗಳು 71 ಕಾಲೇಜುಗಳನ್ನು ಹೊಂದಿರಲಿವೆ. ಇವುಗಳ ಜತೆಗೆ ಮಂಡ್ಯ ವಿ.ವಿ. ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು  ಬರಲಿವೆ ಎಂದು ಅವರು ವಿವರಿಸಿದರು.

ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿವಿಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು ಎಂದು ಅವರು ವಿವರಿಸಿದರು.

ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯ ಇದರ ಹಿಂದಿದೆ ಎಂದು ಸಚಿವರು ತಿಳಿಸಿದರು.

ನೂತನ ವಿ.ವಿ.ಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT