ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 796 ಸೇರಿ ರಾಜ್ಯದಲ್ಲಿ 1286 ಮಂದಿಗೆ ಪಾಸಿಟಿವ್; 3 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1286 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,46,105ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1286 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,46,105ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40182ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 796 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1861478ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 2358 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3997181ಕ್ಕೆ ಏರಿಕೆಯಾಗಿದೆ. ಇನ್ನು 8700 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

SCROLL FOR NEXT