ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ: ವಿದ್ಯುತ್ ಬಿಲ್ ಪಾವತಿ ನೆಪದಲ್ಲಿ ಗ್ರಾಹಕರಿಗೆ ವಂಚನೆ, ಬೆಸ್ಕಾಂನಿಂದ ಪೊಲೀಸ್ ದೂರು

ಆನ್ಲೈನ್‌ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್‌ ವಂಚಕರ ಜಾಲದ ವಿರುದ್ದ ಕ್ರಮ ಜರಗಿಸುವಂತೆ ಕೋರಿ ಸೈಬರ್‌ ಕ್ರೈಂ ಠಾಣೆಗೆ ಬೆಸ್ಕಾಂ ದೂರು ನೀಡಿದೆ.  

ಬೆಂಗಳೂರು: ಆನ್ಲೈನ್‌ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್‌ ವಂಚಕರ ಜಾಲದ ವಿರುದ್ದ ಕ್ರಮ ಜರಗಿಸುವಂತೆ ಕೋರಿ ಸೈಬರ್‌ ಕ್ರೈಂ ಠಾಣೆಗೆ ಬೆಸ್ಕಾಂ ದೂರು ನೀಡಿದೆ. 

ಸೈಬರ್‌ ವಂಚಕರ ಕುರಿತು ಬೆಸ್ಕಾಂ ತನ್ನ ಗ್ರಾಹಕರಿಗೆ ಸಾಕಷ್ಟು ಅರಿವು ಮೂಡಿಸುತ್ತಿದ್ದರೂ, ಗ್ರಾಹಕರು ಸೈಬರ್‌ ವಂಚಕರ ಮೋಸದ ಜಾಲಕ್ಕೆ ಸಿಲುಕುತ್ತಿದ್ದಾರೆ.  ವಿದ್ಯುತ್‌ ಶುಲ್ಕ ಪಾವತಿಸುವಂತೆ ಎಸ್‌ಎಂಎಸ್‌ ಬಂದಿರುವ ಕುರಿತು ಸುಮಾರು 16 ಗ್ರಾಹಕರು ಜೂನ್‌ ಮತ್ತು ಜುಲೈ ತಿಂಗಳಲ್ಲಿ 1912 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಗ್ರಾಹಕರ ಮಾಹಿತಿ ಆಧರಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿರುವ ಸೈಬರ್‌ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

‘ವಿದ್ಯುತ್ ಅಧಿಕಾರಿಗಳ’ ಸೋಗಿನಲ್ಲಿ ಗ್ರಾಹಕರನ್ನು ವಂಚಿಸುವ ಆನ್‌ಲೈನ್ ವಂಚಕರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸುವಂತೆ ಕೋರಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ (ಸಿಇಎನ್) ಪೊಲೀಸರಿಗೆ ದೂರು ನೀಡಿದೆ. “ಸೈಬರ್‌ ವಂಚಕರು ಬೆಸ್ಕಾಂ ಹೆಸರಿನಲ್ಲಿ ಗ್ರಾಹಕರಿಗೆ ಎಸ್‌ಎಂಎಸ್‌ ಕಳುಹಿಸಿ, ವಿದ್ಯುತ್‌ ಬಿಲ್‌ ಪಾವತಿಸದಿದ್ದರೆ ನಿಮ್ಮ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡುತ್ತಿದ್ದಾರೆ. ವಿದ್ಯುತ್‌ ಸಂಪರ್ಕ ಕಡಿತವಾಗುತ್ತದೆ ಎಂಬ ಭಯದಿಂದ ಗ್ರಾಹಕರು ತಕ್ಷಣವೇ ಆನ್ಲೈನ್‌ ಮೂಲಕ ಹಣ ಪಾವತಿಸಿ ಮೋಸ ಹೋಗುತ್ತಿದ್ದಾರೆ” ಎಂದು ಬೆಸ್ಕಾಂ ನ ಪ್ರಧಾನ ವ್ಯವಸ್ಥಾಪಕ (ಗ್ರಾಹಕ ಸಂಬಂಧ) ಎಸ್. ಆರ್. ನಾಗರಾಜ ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 

ದೂರು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿರುವ ಸೈಬರ್‌ ಅಪರಾಧ ವಿಭಾಗದ ಪೊಲೀಸರು, ಗ್ರಾಹಕರಿಗೆ ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಿಂದ ಗ್ರಾಹಕರಿಗೆ ಎಸ್‌ ಎಂಎಸ್‌ ಮತ್ತು ಕರೆಗಳು ಬಂದಿದ್ದು, ತನಿಖೆ ಆರಂಭಿಸಿದ್ದೇವೆ  ಎಂದು ತಿಳಿಸಿದ್ದಾರೆ.  ಇದೊಂದು ಸಂಘಟಿತ ಅಪರಾಧವಾಗಿದ್ದು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಪೊಲೀಸರ ಜೊತೆಗೆ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಸೈಬರ್‌ ಅಪರಾಧ ವಿಭಾಗದ ಪೊಲೀಸರು ತಿಳಿಸಿದ್ದಾರೆ. 

ಇತ್ತೀಚೆಗೆ ಹಲವಾರು ಗ್ರಾಹಕರು ವಿದ್ಯುತ್ ಬಿಲ್ ಪಾವತಿಸುವಂತೆ ಎಸ್‌ಎಂಎಸ್‌ಗಳನ್ನು ಸ್ವೀಕರಿಸಿದ್ದು, 1912 ಸಹಾಯವಾಣಿಗೆ ದೂರು ನೀಡಿದ್ದರು. ಅವರು ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಿಂದ ಎಸ್‌ಎಂಎಸ್ ಮತ್ತು ಕರೆಗಳನ್ನು ಸ್ವೀಕರಿಸಿದ್ದಾರೆ. “ನಮ್ಮ ಅನೇಕ ಗ್ರಾಹಕರು ಆನ್‌ಲೈನ್ ವಂಚಕರು ಕಳುಹಿಸಿದ ಲಿಂಕ್ ಮೂಲಕ ವಿದ್ಯುತ್ ಬಿಲ್ ಪಾವತಿಸಿದ್ದಾರೆ ಮತ್ತು ತಮ್ಮ ಹಣವನ್ನು ಕಳೆದುಕೊಂಡಿದ್ದಾರೆ. ಈ ಮಾಹಿತಿಯನ್ನು ಅಲ್ಲಿನ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಸಿಇಎನ್ ಪೊಲೀಸರು ತಿಳಿಸಿದ್ದಾರೆ. ಬೆಸ್ಕಾಂ ಬಿಲ್ಲಿಂಗ್ ಕೌಂಟರ್‌ಗಳು, ಬೆಸ್ಕಾಂ ಮಿತ್ರ ಆಪ್ ಅಥವಾ ಬೆಸ್ಕಾಂ ಆನ್‌ಲೈನ್ ಪೋರ್ಟಲ್‌ನಲ್ಲಿ ಮಾತ್ರ ವಿದ್ಯುತ್ ಬಿಲ್‌ಗಳನ್ನು ಪಾವತಿಸುವಂತೆ ಬೆಸ್ಕಾಂ ತನ್ನ ಗ್ರಾಹಕರಿಗೆ ಪದೇ ಪದೇ ವಿನಂತಿಸಿದೆ. ವಿದ್ಯುತ್‌ ಬಿಲ್‌ ಪಾವತಿಸುವಂತೆ ಬೆಸ್ಕಾಂ ತನ್ನ ಗ್ರಾಹಕರಿಗೆ ಎಸ್‌ಎಂಎಸ್‌ ಕಳುಹಿಸುವುದಿಲ್ಲ ಅಥವಾ ಕರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಸ್ಕಾಂ ತನ್ನ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ, ಆನ್ ಲೈನ್ ವಂಚನೆ ಬಗ್ಗೆ ಗ್ರಾಹಕರಿಗೆ ನಿರಂತರ ಮಾಹಿತಿ ನೀಡುತ್ತಿದ್ದು, ಗ್ರಾಹಕರು ವಿದ್ಯುತ್ ಬಿಲ್ ಗಳನ್ನು ಬೆಸ್ಕಾಂ  ಸೂಚಿಸಿರುವ ಪಾವತಿ ಕೇಂದ್ರಗಳಾದ ಬೆಂಗಳೂರು ಒನ್, ಬೆಸ್ಕಾಂ ಮಿತ್ರ ಆ್ಯಪ್, ಬೆಸ್ಕಾಂ ಕಚೇರಿ ಮತ್ತು ಬೆಸ್ಕಾಂ ವೆಬ್ ಸೈಟ್ ಮೂಲಕವೇ ಹಣ ಪಾವತಿಸಲು ಕೋರಲಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್