ರಾಜ್ಯ

ಪ್ರತಿ ಗಣೇಶ ಮೂರ್ತಿಗೆ ಭದ್ರತೆ ನೀಡಲು ಸಾಧ್ಯವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

Shilpa D

ಬೆಂಗಳೂರು: ನಗರದಲ್ಲಿ ಗಣೇಶೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಂಡಿರುವ ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳು, ಪುರಭವನದಲ್ಲಿ ಗುರುವಾರ ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ, ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಪ್ರತಿ ಗಣೇಶ ಮೂರ್ತಿಗೂ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸುರಕ್ಷತೆ ದೃಷ್ಟಿಯಿಂದ ಪ್ರತಿಯೊಂದು ಪೆಂಡಾಲ್ ಒಳಗೆ ಹಾಗೂ ಹೊರಗೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯವಾಗಿದೆ. ಜೊತೆಗೆ, ಆಯೋಜಕರೇ ತಮ್ಮ ಪೆಂಡಾಲ್ ಬಳಿ ಸರದಿ ಪ್ರಕಾರ 24 ಗಂಟೆಯೂ ಗಸ್ತು ತಿರುಗಿದರೆ ಒಳ್ಳೆಯದು. ಇದರಿಂದ ಅಹಿತಕರ ಘಟನೆಗಳು ನಡೆಯದಂತೆ ತಡೆಯಬಹುದು’ ಎಂದೂ ಹೇಳಿದರು.

‘ರಸ್ತೆಯ ನಡುವೆ ಪೆಂಡಾಲ್ ನಿರ್ಮಿಸಬಾರದು. ಅಗ್ನಿಶಾಮಕ ವಾಹನ, ಆಂಬುಲೆನ್ಸ್ ಹಾಗೂ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಜಾಗವಿರುವಂತೆ ನೋಡಿಕೊಳ್ಳಬೇಕು. ತಮ್ಮ ವ್ಯಾಪ್ತಿಯ ಠಾಣೆ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಭದ್ರತೆಗೆ ಅವರ ಸಹಾಯ ಪಡೆಯಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ  ನಿಗಾ ವಹಿಸಬೇಕು’ ಎಂದು ಪ್ರತಾಪ್ ರೆಡ್ಡಿ ತಿಳಿಸಿದರು.

ಗಣೇಶೋತ್ಸವ ಆಚರಣೆ ಸಂಬಂಧ 2018- 2019ರಲ್ಲಿ ರೂಪಿಸಿದ್ದ ನಿಯಮಗಳೇ ಈ ವರ್ಷವೂ ಜಾರಿಯಲ್ಲಿರಲಿವೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವದ ಜವಾಬ್ದಾರಿ ವಹಿಸಿಕೊಂಡಿರುವ ಮಂಡಳಿಗಳು, ಸಂಘ-ಸಂಸ್ಥೆಗಳು ಹಾಗೂ ಮುಖಂಡರು, ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಸ್ತೆಯ ನಡುವೆ ಪೆಂಡಾಲ್ ನಿರ್ಮಿಸಬಾರದು. ಅಗ್ನಿಶಾಮಕ ವಾಹನ, ಆಂಬುಲೆನ್ಸ್ ಹಾಗೂ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಜಾಗವಿರುವಂತೆ ನೋಡಿಕೊಳ್ಳಬೇಕು. ತಮ್ಮ ವ್ಯಾಪ್ತಿಯ ಠಾಣೆ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಭದ್ರತೆಗೆ ಅವರ ಸಹಾಯ ಪಡೆಯಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ  ನಿಗಾ ವಹಿಸಬೇಕು’ ಎಂದು ಪ್ರತಾಪ್ ರೆಡ್ಡಿ ತಿಳಿಸಿದರು.

ಏಕಗವಾಕ್ಷಿ ಮೂಲಕ ಅರ್ಜಿ ಸಲ್ಲಿಕೆ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಸಾರ್ವಜನಿಕ ಸ್ಥಳದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಏಕಗವಾಕ್ಷಿ ವ್ಯವಸ್ಥೆ ಮೂಲಕ ಅರ್ಜಿ ಸಲ್ಲಿಸಬೇಕು. ಅದನ್ನು ಪರಿಶೀಲಿಸಿ ಉತ್ಸವಕ್ಕೆ ಅನುಮತಿ ನೀಡಲಾಗುವುದು’ ಎಂದರು. ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಸುಬ್ರಹ್ಮಣ್ಯೇಶ್ವರ್‌ ರಾವ್, ಸಂದೀಪ್ ಪಾಟೀಲ, ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೆಗೌಡ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸಭೆಯಲ್ಲಿ ಭಾಗವಹಿಸಿದ್ದರು.

SCROLL FOR NEXT