ಸಾಂದರ್ಭಿಕ ಚಿತ್ರ 
ರಾಜ್ಯ

ಪುಟ್ಟೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳ ಬಂಧನ

ಭರ್ಜರಿ ಕಾರ್ಯಾಚರಣೆ ನಡೆಸಿದ ಪುಟ್ಟೇನಹಳ್ಳಿ ಪೊಲೀಸರು 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಂದೂವರೆ ಕೋಟಿ ರು. ಮೌಲ್ಯದ ಚಿನ್ನಾಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬೆಂಗಳೂರು:  ಭರ್ಜರಿ ಕಾರ್ಯಾಚರಣೆ ನಡೆಸಿದ ಪುಟ್ಟೇನಹಳ್ಳಿ ಪೊಲೀಸರು 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಂದೂವರೆ ಕೋಟಿ ರು. ಮೌಲ್ಯದ ಚಿನ್ನಾಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.

ತಮಿಳುನಾಡು ಮೂಲದ ಸಂತೋಷ್ ಮತ್ತು ರವಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಇಡೀ ಬೆಂಗಳೂರು ನಗರ ಸುತ್ತಿ ಸರಗಳ್ಳತನ ಮಾಡುತ್ತಿದ್ದರು. ತಲೆಗೆ ಹೆಲ್ಮೆಟ್ ಹಾಕಿಕೊಳ್ಳುತ್ತಿದ್ದ ಕಾರಣ ಇಬ್ಬರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಆರೋಪಿ ಸರಗಳ್ಳ ಸಂತೋಷ್ ಮುಖ ಚಹರೆ ಗೊತ್ತಿರಲಿಲ್ಲ. ಸಿಸಿಟಿವಿಯಲ್ಲಿ ಆರೋಪಿ ದೇಹದ ಮಾದರಿ, ಹೆಲ್ಮೆಟ್ ಹಾಗೂ ಬ್ಲೂ ಕಲರ್ ಶರ್ಟ್ ಬಗ್ಗೆ ಗೊತ್ತಾಗಿತ್ತು. ಅದ್ರಲ್ಲೂ ಆರೋಪಿ ಧರಿಸಿದ್ದ ಹೆಲ್ಮೆ ಟ್ ಮೇಲೆ ಇದ್ದ ಬಿಳಿಬಣ್ಣದ ಗೆರೆ ಆರೋಪಿ ಪತ್ತೆಗೆ ಸಹಕಾರವಾಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಸುಮಾರು ಎರಡೂವರೆ ಕೆಜಿ ಚಿನ್ನವನ್ನು ತಮಿಳುನಾಡಿನಲ್ಲಿ ಮಾರಾಟ ಮಾಡಿದ್ದಾರೆ. ಅರಕೆರೆಯಲ್ಲಿ ವಾಸವಾಗಿದ್ದ ಇಬ್ಬರು ಪಾರ್ಕ್ ಮತ್ತು ದೇವಾಸ್ಥಾನಗಳಿಗೆ ಹೋಗಿ ಬರುತ್ತಿದ್ದ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದರು. ಬಿಕಾಂ ಪದವೀಧರರಾಗಿದ್ದ ಇಬ್ಬರು ಖಾಸಗಿ ಕಂಪನಿಯೊಂದರಲ್ಲಿ ಇಂಟೀರಿಯರ್ ಡೆಕೋರೇಟರ್ ಆಗಿ ಕೆಲಸ ಮಾಡುತ್ತಿದ್ರು. ಕ್ಯಾಸಿನೋ ಚಟಕ್ಕೆ ಬಿದ್ದಿದ್ದರಿಂದ ಹಣ ಹೊಂದಿಸಲು ಅಪರಾಧ ಎಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT