ಚಿತ್ರದುರ್ಗದ ಮುರುಘಾ ಶರಣರು 
ರಾಜ್ಯ

ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ: ಚಿತ್ರದುರ್ಗದ ಮುರುಘಾಶರಣರ ವಿರುದ್ಧ ಎಫ್ಐಆರ್!

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್‌ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ.

ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ.

ಕೋರ್ಟ್‍ನ ಮಾರ್ಗದರ್ಶನದಂತೆ ಇದೀಗ ಎಫ್‍ಐಆರ್ ಪ್ರತಿಯನ್ನು ಚಿತ್ರದುರ್ಗದ ಎಸ್ಪಿಗೆ ಕಳುಹಿಸಲಾಗಿದೆ. ಸ್ವಾಮೀಜಿಯ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ (ಪೋಕ್ಸೊ) ಅಡಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್‌ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. 

ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ' ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ ಹಾಸ್ಟೆಲ್ ಸಿಬ್ಬಂದಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದರು. ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಮುನ್ನ ಕುಟುಂಬಸ್ಥರಿಗೆ ಸಹಾಯ ಹಸ್ತ ನೀಡಲಾಗುತ್ತಿತ್ತು ಹಾಗೂ ನಂತರ ಲೈಂಗಿಕ ಉದ್ದೇಶಕ್ಕೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ.

ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು ಮತ್ತು ಸಿಹಿಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದು ದೂರಲಾಗಿದೆ. ಕಿರುಕುಳ ಪ್ರಶ್ನಿಸಿದ ಕಾರಣ ಹಾಸ್ಟೆಲ್‍ನಿಂದ ಹೊರ ಹಾಕಲಾಗುತ್ತಿತ್ತು ಎಂದು ನೊಂದ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT