ರಾಜ್ಯ

ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ

Nagaraja AB

ಬೆಂಗಳೂರು: ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಜಿ ಕೆಟಗರಿ ಅಡಿಯಲ್ಲಿ ಈ ಹಿಂದೆ ಇತರ ಶಾಸಕರು ಹಾಗೂ ಸಚಿವರು ಮಂಜೂರಾತಿ ಪಡೆದ ರೀತಿಯಲ್ಲಿಯೇ ನನಗೂ ಬಿಡಿಎ ನಿವೇಶನ ಮಂಜೂರಾಗಿರುತ್ತದೆ. ಪ್ರಸ್ತುತ ಬದಲಿ ನಿವೇಶನ ಮಂಜೂರು ಮಾಡಲು ಬಿಡಿಎ ನಿಗದಿಪಡಿಸಿದ ಅಧಿಕ ಶುಲ್ಕವನ್ನೂ ಸಹ ಪಾವತಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ನೂರಾರು ಮಂದಿ ಬಿಡಿಎನಿಂದ ನಿವೇಶನ ಮಂಜೂರಾತಿ ಪಡೆದು, ನೋಂದಣಿ ಶುಲ್ಕ ಕಟ್ಟಿದ್ದರೂ ನಿವೇಶನ ಪಡೆಯುವುದರಿಂದ ವಂಚಿತರಾಗಿದ್ದರು. ನಂತರ ನ್ಯಾಯಾಲಯದ  ಆದೇಶದ ಮೇರೆಗೆ ಅವರಿಗೆ ಬಿಡಿಎ ಪರ್ಯಾಯ ನಿವೇಶನ ನೀಡಿ ಪರಿಹಾರ ಒದಗಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೂರು ಬಾರಿ ಮಂಜೂರಾದ ನಿವೇಶನಕ್ಕೆ ನಾನು ನೋಂದಣಿ ಮಾಡಿದ್ದರೂ, ನಿವೇಶನದ ಹಕ್ಕು ಪಡೆಯಲು ಇದುವರೆಗೂ ಸಾಧ್ಯವಾಗಿಲ್ಲ. ಬಿಡಿಎನಿಂದ ನ್ಯಾಯ ಪಡೆಯಲು, ನ್ಯಾಯಾಲಯದ ಮೊರೆ ಹೋಗಲು ಸಹ ನಿರ್ಧರಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

SCROLL FOR NEXT