ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 429 ಸೇರಿ ರಾಜ್ಯದಲ್ಲಿಂದು 929 ಹೊಸ ಪ್ರಕರಣ ಪತ್ತೆ; 5 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 929 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,49,411ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40,192ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 429 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,63,210ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 987 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,01,318ಕ್ಕೆ ಏರಿಕೆಯಾಗಿದೆ. ಇನ್ನು 7,859 ಸಕ್ರಿಯ ಪ್ರಕರಣಗಳಿವೆ.

SCROLL FOR NEXT