ರಾಜ್ಯ

'ಬುಲ್ ಬುಲ್ ಪಕ್ಷಿ ಮೇಲೆ ಕುಳಿತು ಅಂಡಮಾನ್ ಜೈಲಿನಿಂದ ತಾಯ್ನಾಡಿಗೆ ಬರುತ್ತಿದ್ದ ಸಾವರ್ಕರ್! ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ

Shilpa D

ಬೆಂಗಳೂರು: ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪರಿಷ್ಕೃತಗೊಂಡ ಪಠ್ಯವು  ವ್ಯಾಪಕ ಟೀಕೆಗೆ ಗುರಿಯಾಗಿದೆ. ಎಂಟನೆ ತರಗತಿಯ ದ್ವಿತೀಯ ಭಾಷೆಯ ಕನ್ನಡ ಪಠ್ಯಕ್ಕೆ ಅಳವಡಿಸಿಕೊಂಡಿರುವ ಕೆ.ಟಿ. ಗಟ್ಟಿ ಅವರು ಬರೆದಿರುವ ‘ಕಾಲವನ್ನು ಗೆದ್ದವರು’ ಎಂಬ ಪ್ರವಾಸ ಕಥನದಲ್ಲಿ ಸಾವರ್ಕರ್ ಬಗ್ಗೆ ಪ್ರಸ್ತಾಪಿತ ಪಠ್ಯ ವಿವಾದಕ್ಕೆ ಕಾರಣವಾಗಿದೆ.

ವಿಜಯಮಾಲಾ ರಂಗನಾಥ್‌ ಅವರ ‘ಬ್ಲಡ್‌ ಗ್ರೂಪ್‌’ ಗದ್ಯದ ಬದಲಿಗೆ ಲೇಖಕ ಕೆ.ಟಿ.ಗಟ್ಟಿ ಅವರ ಪ್ರವಾಸ ಕಥನವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯಕ್ಕೆ ಅಳವಡಿಸಿತ್ತು. ಈ ಪ್ರವಾಸ ಕಥನದ ಒಂದು ಪ್ಯಾರಾದಲ್ಲಿ ಸಾವರ್ಕರ್‌ ಕುರಿತು ಈ ರೀತಿಯ ವಾಕ್ಯಗಳಿವೆ.

‘ಕೋಣೆಯೊಳಗಿನ ಹಿಂಬದಿ ಗೋಡೆಯಲ್ಲಿ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ, ಕಿಂಡಿ ಕೂಡ ಇಲ್ಲದ ಆ ಕತ್ತಲ ಕೋಣೆಯಲ್ಲಿ ಸಾವರ್ಕರ್‌ ಅವರನ್ನು ಇಡಲಾಗಿತ್ತು. ಆದರೂ, ಎಲ್ಲಿಂದಲೊ ಬುಲ್‌ಬುಲ್‌ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್‌ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು’ ಎಂದು ಕೆ.ಟಿ.ಗಟ್ಟಿ ವರ್ಣಿಸಿದ್ದಾರೆ. ಲೇಖಕರು ಸಾವರ್ಕರ್ ಇದ್ದ ಅಂಡಮಾನ್ ಸೆಲ್ಯುಲಾರ್ ಕಾರಾಗೃಹಕ್ಕೆ ಭೇಟಿ ನೀಡಿದ ಸಮಯದ ತಮ್ಮ ಅನುಭವಗಳನ್ನು ಕಥನ ರೂಪದಲ್ಲಿ ಬರೆದಿದ್ದಾರೆ.

SCROLL FOR NEXT