ಮುರುಘಾ ಶ್ರೀ 
ರಾಜ್ಯ

ನನ್ನ ವಿರುದ್ಧ ಪಿತೂರಿ, ಯಾವುದೇ ಪಲಾಯನವಾದ ಇಲ್ಲ, ತನಿಖೆಗೆ ಸಂಪೂರ್ಣ ಸಹಕಾರ: ಮುರುಘಾ ಶ್ರೀ

ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

ಚಿತ್ರದುರ್ಗ: ನನ್ನ ವಿರುದ್ಧ ಮುರುಘಾ ಮಠದ ಒಳಗಡೆ ನಡೆಯುತ್ತಿದ್ದ ಪಿತೂರಿ ಇದೀಗ ಹೊರಗಡೆ ನಡೆಯುತ್ತಿದೆ ಎಂದು ಮರಾಧೀಶ ಡಾ. ಶಿವಮೂರ್ತಿ ಶರಣರು ಸೋಮವಾರ ಹೇಳಿದರು.

ಲೈಂಗಿಕ ಕಿರುಕುಳ ಪ್ರಕರಣ ಹಿನ್ನೆಲೆಯಲ್ಲಿ ಮಠದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದರು.

ಈ ನೆಲದ ಕಾನೂನು ಎಲ್ಲರಿಗೂ ಒಂದೇ , ಕಾನೂನನ್ನು ಗೌರವಿಸೋಣ ಎಂದ ಶ್ರೀಗಳು, ಯಾವುದೇ ಕಾರಣಕ್ಕೂ ಪಲಾಯನವಾದ ಇಲ್ಲ, ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಇದಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಲುಪ್ರಯತ್ನಿಸಲಾಗುವುದು, ಎಲ್ಲರೂ ಹೋರಾಡುವ ಮೂಲಕ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು, ಶೀಘ್ರದಲ್ಲಿ ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಅವರು ಹೇಳಿದರು. 

ಭಕ್ತಾಧಿಗಳು ಯಾವುದೇ ಕಾರಣಕ್ಕೂ ಆತಂಕಪಡಬೇಕಾಗಿಲ್ಲ, ಯಾವುದೇ ಊಹಾಪೋಗಳಿಗೆ ಕಿವಿಗೂಡಬಾರದು. ಏನೋ ಒಂದು ಅಹಿತಕರ ಸಂದರ್ಭ ಎದುರಾಗಿದೆ. ಅದನ್ನು ಶಾಂತ ರೀತಿಯಲ್ಲಿ ಬಗೆಹರಿಸಿಕೊಳ್ಳೋಣ, ಕಷ್ಟ ಸಂದರ್ಭದಲ್ಲಿ ಹೊರಗ ಬರೋಣ ಎಂದು ಭಕ್ತರಿಗೆ ವಿಶ್ವಾಸ ತುಂಬಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel