ಚಾಮರಾಜಪೇಟೆ ಮೈದಾನದಲ್ಲಿ ಸಚಿವ ಅಶೋಕ್ 
ರಾಜ್ಯ

75 ವರ್ಷದಿಂದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ.. ನಾಚಿಕೆ ಆಗಲ್ವ: SDPI ವಿರುದ್ಧ ಅಶೋಕ್ ಗರಂ

ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಇಲ್ಲಿ ರಾಷ್ಟ್ರ ಧ್ವಜದಂತೆಯೇ ಕನ್ನಡದ ಧ್ವಜವನ್ನೂ ಕೂಡ ಹಾರಿಸುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ರಾಮನಗರ: ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಇಲ್ಲಿ ರಾಷ್ಟ್ರ ಧ್ವಜದಂತೆಯೇ ಕನ್ನಡದ ಧ್ವಜವನ್ನೂ ಕೂಡ ಹಾರಿಸುತ್ತೇವೆ ಎಂದು ಕಂದಾಯ ಸಚಿವ ಆರ್​.ಅಶೋಕ್ ಹೇಳಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ರಾಮನಗರದ ಮಳೆ-ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್ ಅಶೋಕ್, ಬೆಂಗಳೂರಿನ ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆಯದ್ದು ಎಂದು ಕೋರ್ಟ್ ಕೂಡ ಸೂಚನೆ ಕೊಟ್ಟಿದ್ದೆ. ಮೈದಾನದಲ್ಲಿನ ಕಾರ್ಯಕ್ರಮಗಳ ಕುರಿತು ಅರ್ಜಿ ಹಾಕಿರುವವರ ಜೊತೆ ಮೀಟಿಂಗ್ ಮಾಡಲಾಗಿದೆ. ನಮಾಜ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲಿ ಅರಳಿಮರ, ಶೌಚಾಲಯ‌ ಇದೆ. ಮೈದಾನದ ವಿವಾದದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ಅಂತೆಯೇ  ಚಾಮರಾಜಪೇಟೆಯ ಮೈದಾನ 7 ಕೋಟಿ ಕನ್ನಡಿಗರ ಸ್ವತ್ತು. ಮೈದಾನದ ಬಗ್ಗೆ ಮಾತಾಡಲು ಎಸ್​ಡಿಪಿಐನವರು ಯಾರು? ಆಗಸ್ಟ್ 31ರೊಳಗೆ ರಾಜ್ಯ ಸರ್ಕಾರದ ನಿಲುವು ತಿಳಿಸಲಾಗುವುದು. ಅಂತೆಯೇ ಮೈದಾನದ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ನಮ್ಮದು ಸಂವಿಧಾನದ ಅಡಿಯಲ್ಲಿ ಬಂದ ಸರ್ಕಾರ. ಈ ಮೈದಾನದಲ್ಲಿ ಯಾಕೆ 75 ವರ್ಷ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ. ನಾಚಿಕೆ ಆಗಲ್ವ... ಇದು ಸರ್ಕಾರದ ಸ್ವತ್ತು... ಇಲ್ಲಿ ತ್ರಿವರ್ಣ ಧ್ವಜ ಹಾರಿದ ರೀತಿಯಲ್ಲಿಯೇ ಕನ್ನಡದ ಧ್ವಜ ಕೂಡ ಹಾರಿಸುತ್ತೇವೆ. ಇದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT