ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 450 ಸೇರಿ ರಾಜ್ಯದಲ್ಲಿ 659 ಮಂದಿಗೆ ಪಾಸಿಟಿವ್; 2 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 659 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,50,070ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 29 Aug 2022, 7:17 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 659 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,50,070ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40194ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 30 ಜನರು ಸಾವು

Advertisement

Advertisement

ಬೆಂಗಳೂರಿನಲ್ಲಿ ಇಂದು 450 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1863660ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1192 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40022510ಕ್ಕೆ ಏರಿಕೆಯಾಗಿದೆ. ಇನ್ನು 7324 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement