ಸಾಂದರ್ಭಿಕ ಚಿತ್ರ 
ರಾಜ್ಯ

ರಾಮನಗರ: ಮಳೆ ಆರ್ಭಟಕ್ಕೆ ಆಲದ ಮರ ಉರುಳಿ ಬಿದ್ದು ವ್ಯಕ್ತಿ ಸಾವು

ರಾಮನಗರ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.  ಜಿಲ್ಲೆಯಲ್ಲಿ ಎರಡು ದಶಕಗಳಲ್ಲಿಯೇ  ಈ ಬಾರಿ ಅತ್ಯಧಿಕ ಮಳೆಯಾಗಿದ್ದು, ಮಳೆ ನಾನಾ ಅವಾಂತರಗಳನ್ನು ಸೃಷ್ಟಿಸುತ್ತಿದೆ.

ರಾಮನಗರ: ರಾಮನಗರ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.  ಜಿಲ್ಲೆಯಲ್ಲಿ ಎರಡು ದಶಕಗಳಲ್ಲಿಯೇ  ಈ ಬಾರಿ ಅತ್ಯಧಿಕ ಮಳೆಯಾಗಿದ್ದು, ಮಳೆ ನಾನಾ ಅವಾಂತರಗಳನ್ನು ಸೃಷ್ಟಿಸುತ್ತಿದೆ.

ಮಳೆ ಆರ್ಭಟಕ್ಕೆ ಇಂದು ಬಿಡದಿ ಬಳಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ಆಲದ ಮರ ಉರುಳಿ ಬಿದ್ದು ತೊರೆದೊಡ್ಡಿ ಗ್ರಾಮದ ಬೋರೇಗೌಡ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅನಾಹುತಗಳ ಸಂಖ್ಯೆ ಮುಂದುವರೆದಿದ್ದು, ಚನ್ನಪಟ್ಟಣದ ಬಳಿ ಹಸುವೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಬಗ್ಗೆ ವರದಿಯಾಗಿದೆ. ಇನ್ನೂ ಬೆಂಗಳೂರು- ಮೈಸೂರು ರಸ್ತೆ ಜಲಾವೃತಗೊಂಡು, ವಾಹನಗಳು ನೀರಿನಲ್ಲಿ ಸಿಲುಕಿವೆ.

ಅವುಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಮನಗರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ ನಾರಾಯಣ ಕೂಡಾ ತೆರಳುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT