ಎಡಿಜಿಪಿ ಅಲೋಕ್ ಕುಮಾರ್ 
ರಾಜ್ಯ

ಮುರುಘಾ ಶರಣರ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣದಲ್ಲಿ ಯಾರಿಂದಲೂ ಒತ್ತಡವಿಲ್ಲ ಎಂದ ಎಡಿಜಿಪಿ ಅಲೋಕ್ ಕುಮಾರ್

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದ ಅಡಿಯಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಹುಬ್ಬಳ್ಳಿ: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪೊಕ್ಸೊ ಪ್ರಕರಣದ ಅಡಿಯಲ್ಲಿ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಪೋಷಕರನ್ನು ಸಹ ಸಂಪರ್ಕಿಸಿದ್ದು, ಮಾಹಿತಿಯನ್ನು ಸಂಗ್ರಹಿಸಲು ಮುಂದಾಗಿದ್ದೇವೆ. ಪೊಕ್ಸೊ ಕಾಯ್ದೆಯಡಿ ತನಿಖೆ ಮುಂದುವರಿದಿದೆ' ಎಂದರು.

'ಕೆಲವು ಮಾಧ್ಯಮಗಳಲ್ಲಿ ಮುರುಘಾ ಶ್ರೀಗಳ ಬಂಧನದ ಕುರಿತು ಮಾಹಿತಿ ಬರುತ್ತಿವೆ. ಬಂಧನವಾಗಿದ್ದರೆ ನನಗೆ ಮಾಹಿತಿ ದೊರೆಯುತ್ತಿತ್ತು. ಆದರೆ, ಈವರೆಗೆ ಅಂತಹ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಾಧ್ಯಮಗಳಿಗೆ ಅರ್ಧ ಮಾಹಿತಿಯನ್ನು ನೀಡಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ತನಿಖಾ ಹಂತದಲ್ಲಿ ಯಾವುದೇ ಮಾಹಿತಿ ನೀಡಬಾರದು ಎಂದು ಕೋರ್ಟ್ ಆದೇಶ ಸಹ ಇದೆ' ಎಂದು ಹೇಳಿದರು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ’ (ಪೊಕ್ಸೊ) ಶುಕ್ರವಾರ ದೂರು ದಾಖಲಾಗಿದೆ.

’ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಮಾಡುತ್ತಿರುವುದಾಗಿ, ಅದಕ್ಕೆ ಉಳಿದ ಆರೋಪಿಗಳು ಸಹಕರಿಸಿರುವುದಾಗಿ ವಿದ್ಯಾರ್ಥಿನಿಯರು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ‘ ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT