ವಿಡಿ ಸಾವರ್ಕರ್ 
ರಾಜ್ಯ

ಗಣೇಶೋತ್ಸವಗಳಲ್ಲಿ ಸಾವರ್ಕರ್ ಫೋಟೋ ಹಾಕುವ ಯೋಜನೆ: ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ

ವಿವಿಧ ಗಣೇಶ ಚತುರ್ಥಿ ಸಂಘಗಳ ಒಕ್ಕೂಟವಾದ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿಯು ಸೋಮವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿ, ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಪಾಲಿಕೆಗೆ ಮನವಿ ಮಾಡಿದೆ. 

ಬೆಂಗಳೂರು: ವಿವಿಧ ಗಣೇಶ ಚತುರ್ಥಿ ಸಂಘಗಳ ಒಕ್ಕೂಟವಾದ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿಯು ಸೋಮವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿ, ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವಂತೆ ಪಾಲಿಕೆಗೆ ಮನವಿ ಮಾಡಿದೆ.

ಸೆಪ್ಟೆಂಬರ್ 2, 3, 4 ಹಾಗೂ 9, 10, 11ರಂದು ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದ ಸಮಿತಿ ಸದಸ್ಯ ಪ್ರಕಾಶ್ ರಾಜು, ಬಹುತೇಕ ಎಲ್ಲ ಗಣೇಶೋತ್ಸವ ನಡೆಯುವ ಸ್ಥಳಗಳಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರ ಹಾಕುವ ಯೋಜನೆ ಇದೆ ಎಂದು ತಿಳಿಸಿದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವ ಸ್ಮರಣಾರ್ಥ ಇತರ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳು ಮತ್ತು ಸ್ಧಬ್ಧಚಿತ್ರಗಳನ್ನು ಸಹ ಹೈಲೈಟ್ ಮಾಡಲಾಗುವುದು ಎಂದು ಅವರು ಹೇಳಿದರು.

ಆಚರಣೆ ವೇಳೆ ಸಂಚಾರ ನಿಯಂತ್ರಣ, ಬೀದಿ ದೀಪ ನಿರ್ವಹಣೆ ಸೇರಿದಂತೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಮಿತಿ ಬಿಬಿಎಂಪಿಗೆ ಮನವಿ ಸಲ್ಲಿಸಿದೆ. ಹೆಬ್ಬಾಳ, ಸ್ಯಾಂಕಿ, ಹಲಸೂರು, ಯಡಿಯೂರು ಸೇರಿದಂತೆ ಕೆರೆಗಳಲ್ಲಿ ವಿಗ್ರಹ ವಿಸರ್ಜನೆಗೆ ಕ್ರೇನ್‌ಗಳನ್ನು ನಿಯೋಜಿಸುವಂತೆ ಕೋರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್