ಮುರುಘಾ ಶ್ರೀ 
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.

ಚಿತ್ರದುರ್ಗ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.

ಲೈಂಗಿಕ ದೌರ್ಜನ್ಯ ಎಸಗಿದ ಶ್ರೀಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದವು. ಈ ವೇಳೆ ಮುರುಘಾ ಶ್ರೀಗಳ ವಿರುದ್ಧ ಘೋಷಣೆ ಕೂಗಿದರು.

ಅತ್ಯಾಚಾರ ಪ್ರಕರಣದಲ್ಲಿ ಸಾಮಾನ್ಯ ವ್ಯಕ್ತಿಯೊಬ್ಬ ಆರೋಪಿಯಾಗಿದ್ದರೆ, ಪೊಲೀಸರು ಅವರನ್ನು ಒಂದು ದಿನವೂ ಹೊರಗೆ ಬಿಡುತ್ತಿರಲಿಲ್ಲ. ತಕ್ಷಣ ಬಂಧಿಸುತ್ತಿದ್ದರು. ಆದರೆ ಈ ಸ್ವಾಮೀಜಿ ಪ್ರಭಾವಿ ಎಂಬ ಕಾರಣಕ್ಕೆ ಅವರನ್ನು ಇನ್ನೂ ಬಂಧಿಸಿಲ್ಲ, ಅವರನ್ನು ತಕ್ಷಣ ಬಂಧಿಸಬೇಕಿತ್ತು. ಆದರೆ ಇದುವರೆಗೂ ಯಾವುದೇ ಕ್ರಮವಿಲ್ಲ ಎಂದು ದಲಿತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರವಿ ಅವರು ಆರೋಪಿಸಿದರು.

ಸಂತ್ರಸ್ತ ವಿದ್ಯಾರ್ಥಿನಿಯೊಬ್ಬರು ದಲಿತರಾಗಿರುವುದರಿಂದ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್ ಕೂಡ ದಾಖಲಿಸಲಾಗಿದೆ. ಕೂಡಲೇ ಅವರನ್ನು ಬಂಧಿಸದಿದ್ದಲ್ಲಿ ದಲಿತ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿವೆ ಎಂದು ಅವರು ಎಚ್ಚರಿಸಿದ್ದಾರೆ.

ಏತನ್ಮಧ್ಯೆ, ಸಂತ್ರಸ್ತ ಇಬ್ಬರು ವಿದ್ಯಾರ್ಥಿನಿಯರು ಇಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರು ಭದ್ರತೆಯ ನಡುವೆ ಕೆಲವು ಅಧಿಕಾರಿಗಳೊಂದಿಗೆ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ಸಿಆರ್‌ಪಿಸಿ 164 ರ ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT