ರಾಜ್ಯ

ಬೆಲೆ ಏರಿಕೆ ಬಿಸಿ ನಡುವೆಯೂ ನಾಡಿನಾದ್ಯಂತ ಸಡಗರ, ಸಂಭ್ರಮದ ಗಣೇಶೋತ್ಸವ, ಗಣ್ಯರ ಶುಭಾಶಯ

Nagaraja AB

ಬೆಂಗಳೂರು: ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ  ಸಂಭ್ರಮ ಮನೆ ಮಾಡಿದೆ. ಬೆಲೆ ಏರಿಕೆ ನಡುವೆಯೂ ಜನತೆ ಶ್ರದ್ಧಾ- ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನರು ಮನೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ, ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸುತ್ತಿದ್ದಾರೆ.

ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಬಾಳೆ ದಿಂಡು, ಹೂವು, ಹಣ್ಣು, ಮತ್ತಿತರ ಪೂಜಾ ಸಾಮಾಗ್ರಿಗಳ ಬೆಲೆ ಹೆಚ್ಚಾಗಿದ್ದರೂ ಜನತೆ ಎಂದಿನಂತೆ ಖರೀದಿಯಲ್ಲಿ ತೊಡಗಿದ್ದಾರೆ.

ಈ ಬಾರಿ ಪರಿಸರ ಸ್ನೇಹಿ ಗಣೇಶ ವಿಗ್ರಹಗಳಿಗೆ ಬೇಡಿಕೆ ಹೆಚ್ಚಿದೆ. ಗಣೇಶೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. 

SCROLL FOR NEXT