ಸಂಗ್ರಹ ಚಿತ್ರ 
ರಾಜ್ಯ

2023ರ ಜನವರಿ 5ಕ್ಕೆ ಮತದಾರರ ಅಂತಿಮ ಪಟ್ಟಿ ಬಿಡುಗಡೆ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ

ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಆಂದೋಲನ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಕಚೇರಿ (ಸಿಇಒ) ಕಚೇರಿ ತಿಳಿಸಿದೆ.

ಬೆಂಗಳೂರು: ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಆಂದೋಲನ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಕಚೇರಿ (ಸಿಇಒ) ಕಚೇರಿ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು, ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಈ ವಿಶೇಷ ಆಂದೋಲನವನ್ನು ನಡೆಸಲಾಗುತ್ತಿದೆ. ಎಲ್ಲಾ 224 ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯು ಜಿಲ್ಲಾಧಿಕಾರಿಗಳು, ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಮತದಾರರ ಪಟ್ಟಿ ನೋಂದಣಿ ಅಧಿಕಾರಿಗಳು ಮತ್ತು ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಲಭ್ಯವಿರುತ್ತದೆ ಎಂದು ಹೇಳಿದರು.

ಆಕ್ಷೇಪಣೆಗಳು ಮತ್ತು ಹಕ್ಕುಗಳನ್ನು ಸ್ವೀಕರಿಸಿದ ನಂತರ, ಅಂತಿಮ ಮತದಾರರ ಪಟ್ಟಿಯನ್ನು ಜನವರಿ 5, 2023 ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆಯು ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಅವಧಿ ನೀಡಲಾಗಿದೆ. 24 ಡಿಸೆಂಬರ್ 2022 ರವರೆಗೆ ಅವಧಿ ವಿಸ್ತರಿಸಲಾಗಿದೆ ಮತ್ತು ಈ ಮೂರು ಕ್ಷೇತ್ರಗಳ ಪರಿಷ್ಕೃತ ಮತದಾರರ ಪಟ್ಟಿಯನ್ನು ನಂತರ ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಆನೇಕಲ್‌ ಬಳಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ. ಟೆಂಡರ್: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಸಮುಚ್ಚಯ !

SCROLL FOR NEXT