ಸಿಸಿಟಿವಿಯಲ್ಲಿ ಪತ್ತೆಯಾದ ಚಿರತೆ 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಚಿರತೆ ಪ್ರತ್ಯಕ್ಷ: ಜನರಲ್ಲಿ ಹೆಚ್ಚಿದ ಆತಂಕ!  

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ  ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿಯನ್ನು ಮೂಡಿಸಿದೆ.

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ  ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿಯನ್ನು ಮೂಡಿಸಿದೆ.

ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಟಿವಿಗಳಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. 

ಬೋನ್​ನಲ್ಲಿ ನಾಯಿಮರಿ ಕಟ್ಟಿಹಾಕಿ ಚಿರತೆ ಸೆರೆಗೆ ಪ್ರಯತ್ನಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಖಾಸಗಿ ಕಾರ್ಖಾನೆ ಬಳಿ ಕೂಡ ಎರಡು ದಿನದಿಂದ ಚಿರತೆ ಓಡಾಟ ನಡೆಸಿರುವುದು ಪತ್ತೆಯಾಗಿದೆ. ಈ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಓಡಾಡುವಂತೆ ಅರಣ್ಯ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?