ವಿಕ್ರಮ್ ಕಿರ್ಲೋಸ್ಕರ್ ಪಾರ್ಥಿವ ಶರೀರದ ಮೆರವಣಿಗೆಯ ಚಿತ್ರ 
ರಾಜ್ಯ

ಟೊಯೋಟ ಕಿರ್ಲೋಸ್ಕರ್ ಮೋಟಾರು ಉಪಾಧ್ಯಕ್ಷ ಹೃದಯಾಘಾತದಿಂದ ಸಾವು, ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ 

ಟೊಯೋಟ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಬೆಂಗಳೂರು: ಟೊಯೋಟ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ವಿಕ್ರಮ್ ಕಿರ್ಲೋಸ್ಕರ್ ಅವರು   ಮಂಗಳವಾರ ರಾತ್ರಿ 10 ಗಂಟೆಗೆ ನಿಧನರಾದರು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಕಿರ್ಲೋಸ್ಕರ್ ಗ್ರೂಪ್‌ನ ಮ್ಯಾನೇಜ್‌ಮೆಂಟ್ ಬುಧವಾರ ಮಧ್ಯರಾತ್ರಿ 12.50 ಕ್ಕೆ ಅವರ ನಿಧನದ ಸುದ್ದಿಯನ್ನು ಟ್ವೀಟ್ ಮಾಡಿದೆ. ಬುಧವಾರ ಮಧ್ಯಾಹ್ನ ಹೆಬ್ಬಾಳ ಚಿತಾಗಾರದಲ್ಲಿ ವಿಕ್ರಮ್ ಕಿರ್ಲೋಸ್ಕರ್ ಅವರ ಅಂತ್ಯಕ್ರಿಯೆ ನೆರವೇರಿತು.

ನಾವು ತೀವ್ರ ದುಃಖಿತರಾಗಿದ್ದೇವೆ ಮತ್ತು ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನದ ಬಗ್ಗೆ ನಮ್ಮ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು  ಕಿರ್ಲೋಸ್ಕರ್ ಬ್ರದರ್ಸ್ ಲಿಮಿಟೆಡ್ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. 

ಧಾರವಾಡದಿಂದ ಬಂದಿದ್ದ ಕಿರ್ಲೋಸ್ಕರ್ ಕುಟುಂಬ  ಹೆಬ್ಬಾಳದ ಬಳಿ ವಾಸವಿದ್ದರು. ಅಕ್ಟೋಬರ್ 1997 ರಲ್ಲಿ ಬಿಡದಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಸ್ಥಾಪಿಸಿ, ಡಿಸೆಂಬರ್ 1999 ರಲ್ಲಿ ಉತ್ಪಾದನೆ ಪ್ರಾರಂಭಿಸಲಾಗಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT