ಮೈಸೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ 
ರಾಜ್ಯ

ಮೈಸೂರು ಬಳಿ ಮತ್ತೆ ಕಾಣಿಸಿಕೊಂಡ ಚಿರತೆ; ತಾಯೂರು ಗ್ರಾಮದಲ್ಲಿ ದೃಶ್ಯ ಮೊಬೈಲ್‌ನಲ್ಲಿ ಸೆರೆ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ನಗರದ ತಿ.ನರಸೀಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ನಗರದ ತಿ.ನರಸೀಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.

ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಮೀತಿ ಮೀರುತ್ತಿದೆ. ಒಂದು ತಿಂಗಳಲ್ಲಿ ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಚಿರತೆಗಳ ಓಡಾಟ ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿದೆ. 

ಇದರ ನಡುವೆಯೇ ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ಮಾಜಿ ಸಿಎಂ ಸಿದ್ದರಾಮಯ್ಯ ಹುಟ್ಟೂರಾದ ಸಿದ್ದರಾಮನಹುಂಡಿಯ 5 ಕಿ.ಮೀ.ಅಂತರದ ತಾಯೂರು ಗ್ರಾಮದಲ್ಲಿ ಚಿರತೆ ಕಾಣ ಸಿಕ್ಕಿದೆ. ರಾತ್ರಿ ವೇಳೆ ತಮ್ಮ ಗ್ರಾಮಕ್ಕೆ ಕಾರಿನಲ್ಲಿ ಹೋಗುತ್ತಿದ್ದವರು ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಚಿರತೆ ರಾಜಾರೋಷವಾಗಿ ಈ ಭಾಗದಲ್ಲಿ ಓಡಾಡುತ್ತಿದೆ. ರಾತ್ರಿ ಹಗಲೆನ್ನೆದೆ ಎಲ್ಲೆಲ್ಲೂ ಓಡಾಡುತ್ತಿದ್ದು, ಒಂದು ತಿಂಗಳ ಅವಧಿಯಲ್ಲಿ ಅನೇಕ ಜಾನುವಾರುಗಳನ್ನ ತಿಂದು ಹಾಕಿದೆ ಎನ್ನಲಾಗುತ್ತಿದೆ. ಅನೇಕ ಜನರ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆ ಸೆರೆ ಸಿಕ್ಕಿದೆ.

ಈಗಾಗಲೇ ರಾಜ್ಯದಲ್ಲಿ ಚಿರತೆಗೆ ಇಬ್ಬರ ಬಲಿ ಬಳಿಕ ಎಚ್ಚೆತ ಸರ್ಕಾರ ಚಿರತೆ ಶೂಟೌಟ್ ಗೆ ಆದೇಶ ನೀಡಿದ್ದು, ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆ ನಿರ್ದೇಶಿಸಿದೆ. ಅಂತೆಯೇ ಚಿರತೆ ದಾಳಿಯಿಂದ ಮೃತಪಟ್ಟ ಯುವತಿ ಮೇಘನಾ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಈ ಪರಿಹಾರದ ಪೈಕಿ 5 ಲಕ್ಷ ರೂಪಾಯಿ ಚೆಕ್ ಈಗಾಗಲೇ ವಿತರಿಸಲಾಗಿದ್ದು, ಮೃತ ಮೇಘನಾಳ ಕುಟುಂಬಕ್ಕೆ ಪ್ರತಿ ತಿಂಗಳು 2000 ರೂ ನಂತೆ 5 ವರ್ಷ ಪಿಂಚಣಿ ನೀಡಲಾಗುತ್ತದೆ. ಮೃತ ಯುವತಿ ಮೇಘನಾಳ ಕುಟುಂಬಸ್ಥರಲ್ಲಿ ಒಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಗುವುದು. ಅದು ತಕ್ಷಣವೇ  ಜಾರಿಗೆ ಬರಲಿದೆ ಎಂದು MCFO ಮಾಲತಿ ಪ್ರಿಯಾ ಎಂದಿದ್ದಾರೆ. 

ಚಿರತೆ ಹಾವಳಿಯನ್ನು, ಮನುಷ್ಯರಿಗೆ ಪ್ರಾಣಕ್ಕೆ ತೊಂದರೆ ತಪ್ಪಿಸಲು ಟಿ ನರಸೀಪುರ ತಾಲ್ಲೂಕಿನಲ್ಲಿ 15 ತಜ್ಞರ ತಂಡ ನೇಮಕ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT