ಸಂಗ್ರಹ ಚಿತ್ರ 
ರಾಜ್ಯ

ನೇಮಕಾತಿ 2022: ಐಟಿಬಿಪಿಯಲ್ಲಿ 287 ಹುದ್ದೆಗಳು ಖಾಲಿ ಇದೆ!

ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌ (ಟ್ರೇಡ್ಸ್‌ಮನ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌ (ಟ್ರೇಡ್ಸ್‌ಮನ್) ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಹುದ್ದೆ: ಕಾನ್ಸ್‌ಟೇಬಲ್‌ (ಟೈಲರ್, ಗಾರ್ಡನರ್, ಕೊಬ್ಲೇರ್, ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್)

ಕರ್ತವ್ಯ ಸ್ಥಳ: ಭಾರತದೆಲ್ಲೆಡೆ

ಶೈಕ್ಷಣಿಕ ಅರ್ಹತೆ:
ಕಾನ್ಸ್‌ಟೇಬಲ್‌ (ಟೈಲರ್, ಗಾರ್ಡನರ್, ಕೊಬ್ಲೇರ್) – 10ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ನಲ್ಲಿ ಎರಡು ವರ್ಷ ಕೆಲಸದ ಅನುಭವ ಹೊಂದಿರಬೇಕು. ಅಥವಾ ಐಟಿಐ ಅರ್ಹತೆ ಜೊತೆಗೆ ಕೆಲಸದ ಅನುಭವ ಹೊಂದಿರಬೇಕು.
ಕಾನ್ಸ್‌ಟೇಬಲ್‌ (ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅರ್ಹತೆ ಹೊಂದಿರಬೇಕು.

ವಯೋಮಿತಿ
ಕಾನ್ಸ್‌ಟೇಬಲ್‌ (ಟೈಲರ್, ಗಾರ್ಡನರ್, ಕೊಬ್ಲೇರ್) – ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ
ಕಾನ್ಸ್‌ಟೇಬಲ್‌ (ಸಫಾಯ್ ಕರ್ಮಚಾರಿ, ವಾಶರ್ ಮ್ಯಾನ್, ಬಾರ್ಬರ್) – ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ

ಆಯ್ಕೆ ವಿಧಾನ: 
ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ (PST), ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ: 
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿ ವಿಧಾನ: ಆನ್‌ಲೈನ್‌

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 22, 2022

ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ
https://ggle.io/5PKS

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://bityl.co/Fz08

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT